ಗಡಿ ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ರದ್ದು

ಗಡಿ ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ರದ್ದು

ಬೆಂಗಳೂರು: ದ.ಕ. ಜಿಲ್ಲೆ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂವನ್ನು ರದ್ದುಗೊಳಿಸಲಾಗಿದೆ. ರಾಜ್ಯ ಸರಕಾರ ಹೊರಡಿಸಿರುವ ನೂತನ ಆದೇಶದಂತೆ ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ ವಾರಾಂತ್ಯ ಕರ್ಫಯೂವನ್ನು ರದ್ದುಗೊಳಿಸಲಾಗಿದೆ.

      ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಿಂಪಡೆಯಲಾಗಿದ್ದರೂ, ಮಹಾರಾಷ್ಟ್ರ ಮತ್ತು ಕೇರಳ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದೆ. ಅಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಿಸ್ಥಿತಿಗೆ ಅನುಗುನವಾಗಿ ತೀರ್ಮಾನ ಕೈಗೊಳ್ಳುವ ಸ್ವಾತಂತ್ರ್ಯವನ್ನೂ ನೀಡಿದೆ.

      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ವ್ಯಾಪಾರಿಗಳು ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ  ಸ್ಥಳೀಯಾಡಳಿತ ಮತ್ತು ಸ್ಥಳೀಯ ಶಾಸಕರ ಮೇಲೆ ಒತ್ತಡ ಹೇರಿದ್ದರು. ಈ ವಾರಾಂತ್ಯದಲ್ಲಿ ಗಣೇಶ ಹಬ್ಬ ನಡೆಯುತ್ತಿರುವುದೂ ಒತ್ತಡ ಹೆಚ್ಚಾಗಳು ಕಾರಣವಾಗಿತ್ತು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ