ಅಂಗಾರಗೆ ಒಲಿದ ಸಚಿವ ಭಾಗ್ಯ: ಕಣ್ಣೀರಿಟ್ಟ ರೇಣುಕಾಚಾರ್ಯ!!

ಅಂಗಾರಗೆ ಒಲಿದ ಸಚಿವ ಭಾಗ್ಯ: ಕಣ್ಣೀರಿಟ್ಟ ರೇಣುಕಾಚಾರ್ಯ!!

ಬೆಂಗಳೂರು,ಜ.13:ಬಹು ನಿರೀಕ್ಷಿತ ನೂತನ ಸಚಿವರ ಅಧಿಕೃತ ಪಟ್ಟಿ ಬಿಡುಗಡೆಯಾಗಿದ್ದು, ಅದ್ರಂತೆ, ಮುಖ್ಯಮಂತ್ರಿ ಯಡಿಯೂರಪ್ಪ ' 7 ಮಂದಿ ಶಾಸಕರು ಸಚಿವರಾಗಿ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ಅಂತಿಮ ಪಟ್ಟಿಯನ್ನ ರಾಜ್ಯಭವನಕ್ಕೆ ಕಳಿಸಲಾಗಿದೆ' ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಿಜೆಪಿ ಸರ್ಕಾರ ರಚನೆಗೆ ಸಹಾಯವಾಗಿದ್ದ ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಜೊತೆಗೆ ಶಾಸಕರಾದ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಬಿಳಗಿ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಶಾಸಕ ಎಸ್.ಅಂಗಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಏಳು ಸಚಿವರಿಗೆ ಇಂದು ಮಧ್ಯಾಹ್ನ ವಜುಭಾಯಿ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ ಎಂದರು.

ಅಬಕಾರಿ ಸಚಿವ ನಾಗೇಶ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಲು ನಿರ್ಧರಿಸಲಾಗಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಈ ಬಾರಿ ಕೂಡ ಅವಕಾಶ ಸಿಕ್ಕಿಲ್ಲ.

 ಕಣ್ಣೀರಿಟ್ಟ ರೇಣುಕಾಚಾರ್ಯ :
  ನನಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರೇಣುಕಾಚಾರ್ಯಗೆ ತಾಳ್ಮೆ ಎಂದು ಹೇಳಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ