ಅತ್ಯಾಚಾರ ಪ್ರಕರಣ: ಪ್ರಜ್ವಲ್ ಸ್ನೇಹಿತೆಗೆ ಎಸ್‌ಐಟಿ ನೋಟಿಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸ್ನೇಹಿತೆಯೊಬ್ಬರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ಜಾರಿಮಾಡಿದೆ.
ತಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ಧಂತೆಯೇ ಪ್ರಜ್ವಲ್ ಅವರು ಜರ್ಮನಿಗೆ ತೆರಳಿ ತಲೆಮರೆಸಿಕೊಂಡಿದ್ದರು. ವಿದೇಶದಲ್ಲಿ 34 ದಿನ ವಾಸ್ತವ್ಯ ಮಾಡಿದ್ದರು. ಜರ್ಮನಿಯಲ್ಲಿ ಪ್ರಜ್ವಲ್‌ಗೆ ವಾಸ್ತವ್ಯ ಹಾಗೂ ಓಡಾಟಕ್ಕೆ ಸ್ನೇಹಿತೆಯೊಬ್ಬರು ಆರ್ಥಿಕ ನೆರವು ನೀಡಿದ್ದರು ಎನ್ನಲಾಗಿದೆ. ಆಕೆಗೆ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
‘ವಿದೇಶದಲ್ಲಿದ್ದಾಗ ಪ್ರಜ್ವಲ್ ಅವರ ಎಲ್ಲ ಬ್ಯಾಂಕ್ ಖಾತೆಗಳ ವಹಿವಾಟು ಸ್ಥಗಿತ ಮಾಡಲಾಗಿತ್ತು. ಈ ವೇಳೆ ವಿದೇಶದಲ್ಲಿದ್ದ ಸ್ನೇಹಿತೆಯೊಬ್ಬರು ನೆರವು ನೀಡಿದ್ದಕ್ಕೆ ದಾಖಲೆಗಳು ಸಿಕ್ಕಿವೆ. ಅದನ್ನು ಆಧರಿಸಿ, ನೋಟಿಸ್ ಜಾರಿ ಮಾಡಲಾಗಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ