ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ: ಆಗಸ್ಟ್‌ 31ರವರೆಗೆ ಮುಂದೂಡಿಕೆ

ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧ: ಆಗಸ್ಟ್‌ 31ರವರೆಗೆ ಮುಂದೂಡಿಕೆ

ನವದೆಹಲಿ: ಹಂತ ಹಂತವಾಗಿ ಲಾಕ್‌ಡೌನ್‌ ಹಿತೆಗೆಯಲ್ಪಟ್ಟು ದೇಶದ ಜನಜೀವನ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೂ ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ನಿಯಂತ್ರಣಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ.

      ಕೊರೊನಾ ಪ್ರಕರಣಗಳ ಏರಿಳಿತವನ್ನು ಆಧರಿಸಿ ಆಯ್ದ ಕೆಲವೊಂದು ಮಾರ್ಗಗಳಲ್ಲಿ ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ತಿಳಿಸಿದೆ.

      ಕೋವಿಡ್‌–19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2020ರ ಮಾರ್ಚ್‌ 23ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೆ, ವಂದೇ ಭಾರತ್ ಮಿಷನ್ ಯೋಜನೆಯಡಿ ಮೇ 2020ರಿಂದ ವಿಶೇಷ ವಿಮಾನಗಳು ಸಂಚರಿಸುತ್ತಿವೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ