ಅಲ್-ವಫಾ ದಶಮಾನೋತ್ಸವ ಸಂಭ್ರಮ: 12 ಜೋಡಿಗಳಿಗೆ ಸಾಮೂಹಿಕ ವಿವಾಹ

republicday728
republicday468
republicday234

ಬಿ.ಸಿ.ರೋಡು: ಜಿಲ್ಲೆಯ ಪ್ರತಿಷ್ಠಿತ ಅಲ್-ವಫಾ ಚಾರಿಟೇಬಲ್ ಟ್ರಸ್ಟ್ ತನ್ನ ದಶಮಾನೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ 12 ಜೋಡಿಗಳ ಸಾಮೂಹಿಕ ವಿವಾಹವನ್ನು ನೆರವೇರಿಸಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಉಮರ್ ಯು. ಹೆಚ್. ತಿಳಿಸಿದ್ದಾರೆ.

      ಕಳೆದ ಹತ್ತು ವರ್ಷಗಳಿಂದ ಸಮಾಜಮುಖೀ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಅಲ್ ವಫಾ ಚಾರಿಟೇಬಲ್ ಟ್ರಸ್ಟ್ ತನ್ನ ದಶಮಾನೋತ್ಸವವನ್ನು ಸಾಮೂಹಿಕ ವಿವಾಹಗಳ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಳ್ಳುತ್ತಿದೆ. 2021 ಎಪ್ರಿಲ್ 7ರಂದು 12 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ಜರುಗಲಿದೆ. ಬೆಳಿಗ್ಗೆ 11.00ಕ್ಕೆ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೂರ್ನಡ್ಕ ಪೀರ್ ಮೊಹಲ್ಲಾ ಜಮಾಅತ್‍ ಖಾಝಿ ಅಲ್ ಹಾಜ್ ಬಿ.ಕೆ. ಅಬ್ದುಲ್ ಖಾದಿರ್ ಮುಸ್ಲಿಯಾರ್ ಬಂಬ್ರಾಣ ನಿಕಾಹ್‍ ನೇತ್ರತ್ವ ವಹಿಸಲಿದ್ದಾರೆ. ಅಲ್ ವಫಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮುಹಮ್ಮದ್ ಹನೀಫ್ ಗೋಳ್ತಮಜಲು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ವಿವರ ನೀಡಿದರು.
     ಶಾಸಕ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಅಲ್ ಮುಝೈನ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ. ಝಕರಿಯಾ ಜೋಕಟ್ಟೆ, ಎಕ್ಸ್ಪರ್ಟೈಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಎಸ್. ಶೇಖಬ್ಬ ಕರ್ನಿರೆ, ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ವೈಟ್‍ಸ್ಟೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ಎಂ. ಶರೀಫ್, ಕೀಲು ಮತ್ತು ಮೂಳೆ ರೋಗ ತಜ್ಞ ಡಾ. ಅಬ್ದುಲ್ ಬಶೀರ್, ವಿ.ಕೆ.ಹೈಸಂ ಸ್ಟೀಲ್ಸ್ ನ ಆಡಳಿತ ನಿರ್ದೇಶಕ ಅಹ್ಮದ್ ಶಾಕಿರ್, ಮುಹಮ್ಮದ್ ಫಾರೂಖ್ ಪೋರ್ಟ್ ಪೋಲಿಯೋ ಗೋಳ್ತಮಜಲು ಹಾಗೂ ಮನ್ನಾನ್ ಫೌಂಡೇಶನ್‍ನ ಅಧ್ಯಕ್ಷ ಆರಿಫ್ ಬಿ.ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
      ಕೋವಿಡ್-19 ಹಿನ್ನೆಲೆಯಲ್ಲಿ ಆಹ್ವಾನಿತರಿಗೆ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶವಿದ್ದು, ರಾಜ್ಯ ಸರಕಾರದ ಎಲ್ಲಾ ಮಾರ್ಗಸೂಚಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉಮರ್ ಯು.ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ