ಆರ್‌ಡಿಎಕ್ಸ್ ಇಟ್ಟು ಅಯೋಧ್ಯೆಯ ರಾಮ ಮಂದಿರ ಸ್ಫೋಟಿಸುವ ಬೆದರಿಕೆ; ಪ್ರಕರಣ ದಾಖಲು

ಆರ್‌ಡಿಎಕ್ಸ್ ಇಟ್ಟು ಅಯೋಧ್ಯೆಯ ರಾಮ ಮಂದಿರ ಸ್ಫೋಟಿಸುವ ಬೆದರಿಕೆ; ಪ್ರಕರಣ ದಾಖಲು

ಲಕ್ನೋ: ಅಪರಿಚಿತ ವ್ಯಕ್ತಿಯೋರ್ವನಿಂದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಆರ್‌ಡಿಎಕ್ಸ್ ಇಟ್ಟು ಸ್ಫೋಟಿಸುವ ಮತ್ತು ಬಾಬರಿ ಮಸೀದಿಯನ್ನು ನಿರ್ಮಿಸುವ ಬೆದರಿಕೆಗಳು ಬಂದಿವೆ ಎಂದು ಟ್ರಸ್ಟ್ನ ಸಿಎ ಚಂದನ್ ಕುಮಾರ್ ರೈ ಅವರು ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

      2024ರ ಆಗಸ್ಟ್ 22 ರಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಹೆಲ್ಪ್ ಡೆಸ್ಕ್ ವಾಟ್ಸಾಪ್‌ಗೆ ಈ ಸಂದೇಶ ಬಂದಿದೆ. ಈ ಸಂದೇಶ ಉರ್ದು ಭಾಷೆಯಲ್ಲಿ ಇದ್ದು, ಈ ಸಂದೇಶದಲ್ಲಿ ಅಯೋಧ್ಯೆಯ ರಾಮ ಮಂದಿರವನ್ನು 4,000 ಕಿಲೋ ಆರ್‌ಡಿಎಕ್ಸ್ ಇಟ್ಟು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.

      ಪ್ರಕರಣದ ತನಿಖೆಯ ವೇಳೆ ಬಿಹಾರ ಪ್ರಾಂತ್ಯದ ಭಾಗಲ್ಪುರ ಜಿಲ್ಲೆಯ ಬಾಬರ್ ಗಂಜ್ ನಿವಾಸಿ ಮೊಹಮ್ಮದ್ ಅಮನ್ ಹೆಸರು ಬೆಳಕಿಗೆ ಬಂದಿದೆ. ಪ್ರಕರಣ ಬೆನ್ನಲ್ಲೆ ಈ ಕೇಸ್ ನ ತನಿಖೆ ನಡೆಸುತ್ತಿರುವ ಇನ್‌ಸ್ಪೆಕ್ಟರ್ ರಜನೀಶ್ ಕುಮಾರ್ ಪಾಂಡೆ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

      ಈಗಾಗಲೇ ಬಂಧಿತರಾಗಿರುವ ಆರೋಪಿ ಮೊಹಮ್ಮದ್ ಅಮಾನ್ ಜಾಮೀನು ಅರ್ಜಿ ವಿಚಾರಣೆಯ ವೇಳೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ III ಅಶೋಕ್ ಕುಮಾರ್ ದುಬೆ ಈ ಆದೇಶಿಸಿದ್ದಾರೆ. ಘಟನೆಯ ತನಿಖೆ ನಡೆಸುತ್ತಿರುವ ಸಬ್ ಇನ್‌ಸ್ಪೆಕ್ಟರ್ ರಜನೀಶ್ ಕುಮಾರ್ ಪಾಂಡೆ ಅವರಿಗೆ ಮೂಲ ಕೇಸ್ ಡೈರಿ ಮತ್ತು ಅದರ ಎಲ್ಲಾ ನಮೂನೆಗಳೊಂದಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೋರ್ಟ್ ತೀರ್ಪು ನೀಡಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ