ಇತಿಹಾಸ ಬರೆದ ಇಸ್ರೋ: ಚಂದ್ರನ ದಕ್ಷಿಣ ಧ್ರುವಕ್ಕೆ ಅಡಿ ಇಟ್ಟ ಮೊದಲ ದೇಶ ಭಾರತ

ಇತಿಹಾಸ ಬರೆದ ಇಸ್ರೋ: ಚಂದ್ರನ ದಕ್ಷಿಣ ಧ್ರುವಕ್ಕೆ ಅಡಿ ಇಟ್ಟ ಮೊದಲ ದೇಶ ಭಾರತ

ಬೆಂಗಳೂರು: ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದ ಪ್ರದೇಶದಲ್ಲಿ ಇಳಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

      ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಧೆಯ (ಇಸ್ರೊ) ಘೋಷಿಸಿದೆ.

      ಬಳಿಕ ಪ್ರತಿಕ್ರಿಯಿಸಿರುವ ಚಂದ್ರಯಾನ-3 ಯೋಜನೆಯ ಕಾರ್ಯಾಚರಣಾ ನಿರ್ದೇಶಕ ಪಿ. ವೀರಮುತ್ತುವೇಲ್, ಭಾರತವು ಚಂದ್ರನ ದಕ್ಷಿಣ ಧ್ರುವದಲ್ಲಿ ಕಾರ್ಯಾಚರಣೆ ನಡೆಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

      ಇದರ ಜೊತೆಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಾಲ್ಕನೇ ದೇಶ ಎನಿಸಿಕೊಂಡಿದೆ. ಚಂದ್ರನಲ್ಲಿ ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಯಶಸ್ವಿ ಕಾರ್ಯಾಚರಣೆ ನಡೆಸಿವೆ.

      2019ರಲ್ಲಿ ಭಾರತದ ಚಂದ್ರಯಾನ-2 ಯೋಜನೆ ಭಾಗಶಃ ಯಶ ಕಂಡಿತ್ತು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ