ಎ.ಎಸ್.ಐ ಜಯರಾಂ ಹೃದಯಾಘತದಿಂದ ನಿಧನ

ಎ.ಎಸ್.ಐ ಜಯರಾಂ ಹೃದಯಾಘತದಿಂದ ನಿಧನ

ಬಂಟ್ವಾಳ, ಮೇ.31: ಬಂಟ್ವಾಳ ನಗರ ಠಾಣಾ ಎ.ಎಸ್.ಐ. ಜಯರಾಂ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
      ಬೆನ್ನು ನೋವಿನ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜಯರಾಂ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
      ಸೌಮ್ಯ ಸ್ವಭಾವದ ನಿಷ್ಠಾವಂತ ಅಧಿಕಾರಿಯಾದ ಜಯರಾಂ ಅವರು ದ.ಕ. ಜಿಲ್ಲೆಯ ವಿವಿಧ ಪೋಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಬಂಟ್ವಾಳ ನಗರ ಠಾಣೆಯಲ್ಲಿ ಎ,ಎಸ್,ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಲ್ಲರೊಂದಿಗೆ ಸರಳವಾಗಿ ಬೆರೆಯುವ ಇವರ ಗುಣದಿಂದಾಗಿ ಜನಾನುರಾಗಿಯಾಗಿದ್ದರು. ಈ ಹಿಂದೆ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ಸೈ ಎನಿಸಿಕೊಂಡಿದ್ದರು.
      ಮೃತರು ಪತ್ನಿ, ಇಬ್ಬರು ಮಕ್ಕಳು, ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ