ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ..! ಕಂಚು ಗೆದ್ದ ಶೂಟರ್..!

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಎರಡನೇ ದಿನ ಭಾರತ ಕಂಚಿನ ಪದಕದೊಂದಿಗೆ ತನ್ನ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕ ಪಡೆದಿದ್ದಾರೆ. ಶೂಟಿಂಗ್ ವಿಭಾಗದಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ದಾಖಲೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. 2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಯಾವುದೇ ವಿಭಾಗದಲ್ಲೂ ಅರ್ಹತೆ ಪಡೆಯುವಲ್ಲಿ ಮನು ಭಾಕರ್ ಅವರು ವಿಫಲರಾಗಿದ್ದರು.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್ ಸುತ್ತಿನಲ್ಲಿ 221.7 ಪಾಯಿಂಟ್ ಗಳಿಸುವ ಮೂಲಕ ಮುನ ಭಾಕರ್ ಕಂಚಿನ ಪದಕ ಗಳಿಸಿದ್ದಾರೆ. ಕೊರಿಯಾದ ಓಹ್ ಯೆ ಜೆನ್ ಚಿನ್ನದ ಪದಕ ಪಡೆದಿದ್ದರೆ, ಕೊರಿಯಾದ ಮತ್ತೊಬ್ಬ ಸ್ಪರ್ಧಿ ಕಿಮ್ ಯೆಜಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ