ಕೊನೆಗೂ ರಮೇಶ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸು

ಕೊನೆಗೂ ರಮೇಶ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸು

ಬೆಂಗಳೂರು: ಸಿ.ಡಿ. ಪ್ರಕರಣ ಬಯಲಾದ 24 ದಿನಗಳ ನಂತರ ಕೊನೆಗೂ ರಮೇಶ ಜಾರಕಿಹೊಳಿ ವಿರುದ್ಧ ಉದ್ಧೇಶ ಪೂರ್ವಕ ಲೈಂಗಿಕ ದೌರ್ಜನ್ಯ ಕೇಸು ದಾಖಲಾಗಿದೆ.

     ಯುವತಿ ದೂರು ಆಧರಿಸಿ ಬಿಜೆಪಿ ಶಾಸಕ ರಮೇಶ ಜಾರಕಹೊಳಿ ವಿರುದ್ಧ ನಗರದ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಮತ್ತೊಂದು ಮಹಾ ತಿರುವು ಸಿಕ್ಕಂತಾಗಿದೆ.

     ಕೆಲಸ ಕೊಡಿಸುವುದಾಗಿ ನಂಬಿಸಿದ್ದ ರಮೇಶ ಜಾರಕಿಹೊಳಿ, ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಿರುವ ಯುವತಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಮೂಲಕ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು. ದೂರು ಪರಿಶೀಲನೆ ನಡೆಸಿದ್ದ ಕಮಿಷನರ್, ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವಂತೆ ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರಿಗೆ ಸೂಚನೆ ನೀಡಿದ್ದರು. ಅದರನ್ವಯ ಇದೀಗ ದೂರು ದಾಖಲಾಗಿದ್ದು, ರಮೇಶ ಜಾರಕಿಹೊಳಿ ಅವರನ್ನೇ ಆರೋಪಿಯನ್ನಾಗಿ ಮಾಡಲಾಗಿದೆ.

     ಉದ್ದೇಶಪೂರ್ವಕ ಲೈಂಗಿಕ ದೌರ್ಜನ್ಯ (ಐಪಿಸಿ 354 ಎ), ಜೀವ ಬೆದರಿಕೆ (ಐಪಿಸಿ 506), ಅವಾಚ್ಯ ಶಬ್ದಗಳಿಂದ ಬೈದಿರುವ (ಐಪಿಸಿ 504), ಅಧಿಕಾರ ದುರುಪಯೋಗಪಡಿಸಿಕೊಂಡು ಅತ್ಯಾಚಾರ (376–ಸಿ), ನೌಕರಿ ಕೊಡಿಸುವುದಾಗಿ ವಂಚನೆ (ಐಪಿಸಿ 417) ಆರೋಪ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ