ಕನ್ನಡತಿ’ ಖ್ಯಾತಿಯ ನಟ ಕಿರಣ್ ರಾಜ್ ಕಾರು ಅಪಘಾ*ತ; ಆಸ್ಪತ್ರೆಗೆ ದಾಖಲು

ಬೆಂಗಳೂರು : ‘ಕನ್ನಡತಿ’ ಖ್ಯಾತಿಯ ನಟ ಕಿರಣ್ ರಾಜ್ ಅವರ ಕಾರು ಅಪಘಾತವಾಗಿದೆ. ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟಾಗಿದೆ. ಕಾರಿಗೆ ಹಾನಿ ಆಗಿದೆ. ಕೆಂಗೇರಿ ಆಸ್ಪತ್ರೆಗೆ ಕಿರಣ್ ರಾಜ್ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಕಿರಣ್ ರಾಜ್‌ಗೆ ಪ್ರತಿವಾರ ನಿರಾಶ್ರಿತರ ಕೇಂದ್ರಕ್ಕೆ ಊಟ ಕೊಡುವ ಅಭ್ಯಾಸವಿತ್ತು. ಅದೇ ರೀತಿ ಈ ಬಾರಿ ಹೋಗುವಾಗ ಈ ದುರ್ಘಟನೆ ನಡೆದಿದೆ.
ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಯಲ್ಲಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗೆ ಯಾವುದೇ ಅಪಾಯ ಸಂಭವಿಸಿಲ್ಲ.
ಕಿರಣ್ ರಾಜ್ ‘ಕನ್ನಡತಿ’ ಧಾರಾವಾಹಿ ಮೂಲಕ ಪ್ರಸಿದ್ಧರಾಗಿದ್ದರು. ಹರ್ಷ ಪಾತ್ರದ ಮೂಲಕ ಜನಮನ ಗೆದ್ದಿದ್ದರು. ಆ ಧಾರಾವಾಹಿ ಮುಗಿದಿದ್ದು, ಅವರು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ.
ಸೆಪ್ಟೆಂಬರ್ 12ರಂದು ಅವರ ನಟನೆಯ ‘ರಾನಿ’ ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಈ ಅವಘಡ ಸಂಭವಿಸಿದೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ