ಕರ್ನಾಟಕ ಲಾಕ್ ಡೌನ್ ಮತ್ತೆ ಮುಂದೂಡಿಕೆ

ಕರ್ನಾಟಕ ಲಾಕ್ ಡೌನ್ ಮತ್ತೆ ಮುಂದೂಡಿಕೆ

ಬೆಂಗಳೂರು, ಜೂನ್.3: ಕೋವಿಡ್‌-19 ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜೂನ್‌ 7ರವರೆಗೂ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜೂನ್‌ 14ರವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

      ‌ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದರೂ ಕೂಡಾ ವೈರಾಣು ಸರಪಳಿ ಮುಂದುವರಿದಿದೆ. ಆರೋಗ್ಯ ಪರಿಣತರು ನೀಡಿರುವ ಸಲಹೆಯ ಮೇರೆಗೆ ಜೂನ್‌ 14ರವರೆಗೆ ಲಾಕ್‌ ಡೌನ್‌ ವಿಸ್ತರಿಸಲಾಗಿದೆ. ನಾಗರಿಕರು ಎಲ್ಲಾ ನಿಯಮಗಳನ್ನು ಪಾಲಿಸಿ, ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ವಿನಂತಿಸುತ್ತೇನೆ ಎಂದು ಹೇಳಿದರು.

      ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಗುರುಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ.

      ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​ ಘೋಷಿಸಿರುವ ಸಿಎಂ ಯಡಿಯೂರಪ್ಪ, ಮಗ್ಗಗಳ ಕಾರ್ಮಿಕರಿಗೆ, ಚಲನಚಿತ್ರ, ದೂರದರ್ಶನ ಕಲಾವಿದರಿಗೆ ತಲಾ ₹3,000, ಮೀನುಗಾರರಿಗೆ ತಲಾ 3,000 ರೂ, ಅರ್ಚಕರು, ಧಾರ್ಮಿಕ ಗುರುಗಳಿಗೆ, ಅಡುಗೆ ಕೆಲಸಗಾರರಿಗೆ ತಲಾ ₹3,000,

      ಆಶಾ ಕಾರ್ಯಕರ್ತೆಯರಿಗೂ ತಲಾ ₹3000, ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ತಲಾ ₹2,000, ಶಾಲಾ ಮಕ್ಕಳಿಗೆ ಜೂನ್, ಜುಲೈನಲ್ಲಿ ಹಾಲಿನ ಪುಡಿ ನೀಡಿಕೆ, ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ತಲಾ 5,000 ರೂ. ಸಹಾಯ ಧನ ಘೋಷಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ