ಕೊರೋನಾ ಲಸಿಕೆ ಹಾಕಿಸಿಕೊಂಡ ಶಾಸಕ ರಾಜೇಶ್ ನಾಯಕ್

ಕೊರೋನಾ ಲಸಿಕೆ ಹಾಕಿಸಿಕೊಂಡ ಶಾಸಕ ರಾಜೇಶ್ ನಾಯಕ್
republicday728
republicday468
republicday234

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು.
      ಲಸಿಕೆ ಪಡೆದ ಬಳಿಕ ಮಾತನಾಡಿದ ಶಾಸಕರು, ತಾನು ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಖಾಯಿಲೆಯಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟಂತಹ ಬಂಟ್ವಾಳದ ಎಲ್ಲಾ ಜನರು ಕೋವಿಡ್ ಲಸಿಕೆ ಪಡೆಯುವಂತೆ ಮನವಿ ಮಾಡಿದರು. ಇದರಿಂದ ತಮಗೆ ಹಾಗೂ ಸಮಾಜಕ್ಕೆ ಒಳತಾಗುತ್ತದೆ. ಕೊರೊನಾದ 2ನೇ ಅಲೆಯ ಕುರಿತು ಜನತೆ ಆತಂಕದಲ್ಲಿದೆ. ಹೀಗಾಗಿ ತಮ್ಮ ಹಾಗೂ ಇತರರ ರಕ್ಷಣೆಯ ದೃಷ್ಟಿಯಿಂದ ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ವಿತರಣೆಯಾಗುತ್ತಿದೆ. ಜನತೆ ಇದರ ಪ್ರಯೋಜನ ಪಡೆಯಬೇಕಿದೆ ಎಂದರು.
      ಶಾಸಕರ ಜೊತೆ ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಅವರು ಕೂಡ ಲಸಿಕೆ ಪಡೆದುಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳು ಜತೆಗಿದ್ದರು

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ