ಕೇರಳ ಮೂಲದ ವಿದ್ಯಾರ್ಥಿಯ ರ಼್ಯಾಗಿಂಗಿಂಗ್: ಮಂಗಳೂರಿನಲ್ಲಿ ಒಂಭತ್ತು ಮಂದಿಯ ಬಂಧನ

1.

ಮಂಗಳೂರು. ಜನವರಿ 22:  ಕೇರಳ ಮೂಲದ ವಿದ್ಯಾರ್ಥಿಗೆ ರ಼್ಯಾಗಿಂಗ್ ಮಾಡಿದ ಆರೋಪದಲ್ಲಿ ನಗರದ ಖಾಸಗಿ ಕಾಲೇಜಿನ ಒಂಭತ್ತು ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಮೊದಲ ವರ್ಷದ ಬಿ-ಫಾರ್ಮಾ ವಿದ್ಯಾರ್ಥಿಗೆ ತಲೆಕೂದಲು ಮತ್ತು ಮೀಸೆ ತೆಗೆದು ಬರುವಂತೆ ಹಿರಿಯ ವಿದ್ಯಾರ್ಥಿಗಳು ಒತ್ತಡ ಹೇರಿದ್ದಲ್ಲದೆ, ಹಿರಿಯ ವಿದ್ಯಾರ್ಥಿಗಳ ಮಾತು ಕೇಳದ ಪ್ರಥಮ ವರ್ಷದ ವಿದ್ಯಾರ್ಥಿಗೆ ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿ ನೀಡಿದ ದೂರಿನಂತೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿ ಕರ್ನಾಟಕ ಎಜುಕೇಶನ್ ಆ್ಯಕ್ಟ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ