ಕೋವಿಡ್‌ ನಿಯಮ ಉಲ್ಲಂಘಿಸಿ ಜನಾಶೀರ್ವಾದ ಯಾತ್ರೆ: ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್

ಕೇಂದ್ರದ ನೂತನ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ನಡೆಯುತ್ತಿರುವ  ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ‌ ಕಲ್ಬುರ್ಗಿ ನಗರದ ಬ್ರಹ್ಮಪುರ ಠಾಣೆ ಪೊಲೀಸರು ಬಿಜೆಪಿ ಜಿಲ್ಲಾ ಮುಖಂಡರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಕೋವಿಡ್‌ ನಿಯಮ ಉಲ್ಲಂಘಿಸಿ ಜನಾಶೀರ್ವಾದ ಯಾತ್ರೆ: ಬಿಜೆಪಿ ಮುಖಂಡರ ವಿರುದ್ಧ ಎಫ್‌ಐಆರ್

ಕಲಬುರ್ಗಿ: ಕೇಂದ್ರದ ನೂತನ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ನಡೆಯುತ್ತಿರುವ  ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಗರದ ಬ್ರಹ್ಮಪುರ ಠಾಣೆ ಪೊಲೀಸರು ಬಿಜೆಪಿ ಜಿಲ್ಲಾ ಮುಖಂಡರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಕೋವಿಡ್‌ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಬಹಿರಂಗ ಸಮಾವೇಶ, ರಾಜಕೀಯ ಕಾರ್ಯಕ್ರಮಗಳು ಸೇರಿದಂತೆ ಹೆಚ್ಚು ಜನರು ಸೇರುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆ ನಿರ್ಬಂಧವನ್ನು ಉಲ್ಲಂಘಿಸಿ ಮಂಗಳವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಬಿಜೆಪಿಯು ಜನಾಶೀರ್ವಾದ ಯಾತ್ರೆಯನ್ನು ಆಯೋಜಿಸಿದ್ದಲ್ಲದೇ ರಾತ್ರಿ ಕರ್ಫ್ಯೂ ನಿಯಮಗಳನ್ನು ಮೀರಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಪ್ರಯುಕ್ತ ತಹಶೀಲ್ದಾರ್ ಪ್ರಕಾಶ ಕುದರಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ವೈ.ಎಸ್. ರವಿಕುಮಾರ್  ತಿಳಿಸಿದ್ದಾರೆ

      ಜನಾಶೀರ್ವಾದ ಯಾತ್ರೆ ನಿಮಿತ್ತ ನಗರದ ವಿವಿಧೆಡೆ ಸಚಿವರು, ಶಾಸಕರ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ನಗರದಲ್ಲಿ ಮಹಾನಗರ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಾಲಿಕೆ ಆಯುಕ್ತರು ಅವುಗಳನ್ನು ಮಂಗಳವಾರ ಮಧ್ಯಾಹ್ನವೇ ತೆರವುಗೊಳಿಸಿದ್ದರು.

      ವಾರಾಂತ್ಯ ಕರ್ಫ್ಯೂ, ನೈಟ್‌ ಕರ್ಫ್ಯೂ, ಲಾಕ್‌ಡೌನ್‌ಗಳಿಂದಾಗಿ ಸಾಮಾನ್ಯ ಜನರ ಜೀವನ ಅಸ್ತವ್ಯಸ್ತಗೊಂಡಿದ್ದರೂ, ಸೋಂಕು ನಿಯಂತ್ರಣಕ್ಕಾಗಿ ಆಡಳಿತದೊಂದಿಗೆ ಸಹಕರಿಸಿಕೊಂಡು ಮುಂದುವರಿಯುತ್ತಿದ್ದಾರೆ. ಅಂತಹುದರಲ್ಲಿ ಆಡಳಿತ ಪಕ್ಷದ ಸಚಿವರು, ನಾಯಕರುಗಳೇ ಕಾನೂನನ್ನು ಉಲ್ಲಂಘಿಸುತ್ತಿರುವುದು ಎಷ್ಟು ಸರಿ? ಎಫ್‌ಐಆರ್‌ ಕಾಟಾಚಾರಕ್ಕೆ ಸೀಮಿತವಾಗದೆ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿದಾಗಲೇ ಇಂತಹ ಘಟನೆಗಳು ನಿಯಂತ್ರಣಕ್ಕೆ ಬರಬಹುದು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ