ಕಾವಳಮೂಡೂರು ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕಾವಳಮೂಡೂರು ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಇಲ್ಲಿಗೆ ಸಮೀಪದ ಕಾವಳಮೂಡೂರು ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಭಾಗೀದಾರಿಕೆಯೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

      ಮಕ್ಕಳಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕೋವಿಡ್‌ ಕಾರಣದಿಂದ ಸುದೀರ್ಘ ಕಾಲ ಶಾಲೆಯಿMದ ದೂರ ಉಳಿದಿದ್ದ ಮಕ್ಕಳು ಶಾಲೆ ಪುನರಾರಂಭಗೊMಡ ನಂತರದ ಈ ಕಾರ್ಯಕ್ರಮದಲ್ಲಿ ಅತ್ಯತ್ಸಾಹದಿಂದಲೇ ಭಾಗವಹಿಸಿದರು.

      ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ ಹಾಗೂ ಎಸ್‌ಡಿಎಮ್‌ಸಿ ಸದಸ್ಯರ ಪ್ರೋತ್ಸಾಹ, ಮುತುವರ್ಜಿ ಎದ್ದು ಕಾಣುತ್ತಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಬಹುಮಾನವನ್ನು ವಿತರಿಸಲಾಯಿತು. ಶಾಲಾಭಿವೃದ್ದಿ ಸಮಿತಿಯು ಮಕ್ಕಳಿಗೆ  ಸಿಹಿ ಭೋಜನದ ಏರ್ಪಾಡು  ಮಾಡಿತ್ತು.

      ಕಾರ್ಯಕ್ರಮದಲ್ಲಿ ಕಾವಳಮೂಡೂರು ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಯುತ ಖಲೀಲ್, ಶ್ರೀಮತಿ ಶೈನಾಝ್, ಜಯಂತಿ, ಎಸ್‌ಡಿಎಮ್‌ಸಿ ಸದಸ್ಯರು, ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕ ವೃಂದ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅತ್ಯತ್ಸಾಹದಿಂದಲೇ ಕಾರ್ಯಕ್ರಮವನ್ನು ಆಯೋಜಿಸಿತ್ತು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ