ಗಗನದತ್ತ ಪೆಟ್ರೋಲ್ ಬೆಲೆ

ನವದೆಹಲಿ, ಜನವರಿ 7: ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಗಗನದತ್ತ ಮುಖ ಮಾಡಿದ್ದು, ತಿಂಗಳ ಬಳಿಕ ನಿನ್ನೆ ಏರಿಕೆ ಕಂಡಿತ್ತು. ಇಂದು ಮತ್ತೆ ದಾಖಲೆಯ ಏರಿಕೆ ಕಂಡಿದೆ.
ದೆಹಲಿಯಲ್ಲಿ ಗುರುವಾರ ಪೆಟ್ರೋಲ್ ಬೆಲೆ 23 ಪೈಸೆ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ ಮಟ್ಟತಲುಪಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 84.20 ರೂ. ಹಾಗೂ ಡೀಸೆಲ್ ಬೆಲೆ ಯೂ 26 ಪೈಸೆ ಏರಿಕೆ ಕಂಡು ಬಂದಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90.83 ಮತ್ತು ಡೀಸೆಲ್ ಲೀಟರ್ಗೆ 81.07ಕ್ಕೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 87.04 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ದರ ಲೀಟರ್ ಗೆ 78.87 ರೂಪಾಯಿಗೆ ತಲುಪಿದೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ