ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಮಂಗಳೂರು, ಮಾ 10: ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಇಬ್ಬರು ಯುವಕರನ್ನು ಉಳ್ಳಾಲ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.
ಬಂಧಿತರನ್ನು ಸೋಮೇಶ್ವರ ಗ್ರಾಮದ ನಿವಾಸಿಗಳಾದ ಉಮ್ಮರ್ ಫಾರೂಕ್(25) ಮತ್ತು ಕುತ್ತಾರು ನಿವಾಸಿ ಹಂಝ ಫವಾಹಿದ್(26) ಎಂದು ಗುರುತಿಸಲಾಗಿದೆ. ಆರೋಪಿಗಳು ಕೋಟೆಕಾರು ಗ್ರಾಮದ ಅಜ್ಜಿನಡ್ಕ ಪರಿಸರದಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ
ಆರೋಪಿಗಳಿಂದ 1,500ರೂ.ಗಳ ಮೌಲ್ಯದ (150 ಗ್ರಾಂ) ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಎನ್ ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ