ಗಡಿಯನ್ನು ಕಾಯೋ ಹೆಣ್ಣಿಗೆ ತನ್ನನ್ನು ತಾನೇ ರಕ್ಷಿಸಿಕೊಳ್ಳುವ ಶಕ್ತಿ ಇದೆ – ಅಕ್ಷತಾ ಬಜ್ಪೆ

ಗಡಿಯನ್ನು ಕಾಯೋ ಹೆಣ್ಣಿಗೆ ತನ್ನನ್ನು ತಾನೇ ರಕ್ಷಿಸಿಕೊಳ್ಳುವ ಶಕ್ತಿ ಇದೆ – ಅಕ್ಷತಾ ಬಜ್ಪೆ

ಬಂಟ್ವಾಳ, ಮಾರ್ಚ್‌ 8: ಅವಕಾಶ ಮತ್ತು ಆಯ್ಕೆ ನಮ್ಮ ಕೈಯಲ್ಲಿಯೇ ಇದೆ. ಗಡಿಯಲ್ಲಿ ನಿಂತುಕೊಂಡು ದೇಶವನ್ನು ರಕ್ಷಿಸುವ ಹೆಣ್ಣಿಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಶಕ್ತಿ ಖಂಡಿತವಾಗಿಯೂ ಇದೆ. ಅದಕ್ಕಾಗಿ ಹೆಣ್ಣು ದೈಹಿಕವಾಗಿ ಮತ್ತು ಮಾನಸಿಕವಾಗಿ ತಯಾರಾಗಬೇಕಾಗಿದೆ. ವಿದ್ಯಾರ್ಥಿನಿಯರು ಅವಕಾಶಗಳ ಬೆನ್ನತ್ತಿ ಹೋದಾಗ ಸಾಧನೆಯ ಶಿಖರವನ್ನೇರಲು ಸಾದ್ಯ ಎಂದು ಎಬಿವಿಪಿ ಹಿರಿಯ ಕಾರ್ಯಕರ್ತೆ ಅಕ್ಷತಾ ಬಜ್ಪೆ ಹೇಳಿದರು. ಅವರು ಸಿದ್ದಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಘಟಕ ಏರ್ಪಡಿಸಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡುತ್ತಿದ್ದರು.

ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ದಕಟ್ಟೆ ಇಲ್ಲಿಯ ವೈದ್ಯರಾದ ಡಾ.ಸೀಮಾ ಸುದೀಪ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡುತ್ತಾ ಮಾನಸಿಕ ಒತ್ತಡದಿಂದ ವಿಮುಕ್ತರಾಗುವ ಮೂಲಕ ಮಹಿಳಾ ಸಬಲೀಕರಣ ಸಾದ್ಯ ಎಂದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ಅಸ್ಸಾಂನ ಗುವಾಹಟಿಯಲ್ಲಿ ನಡೆದ 32 ನೇ ರಾಷ್ಟ್ರೀಯ ಮಟ್ಟದ ಅಥ್ಲೇಟಿಕ್ ಚಾಂಪಿಯನ್ ಶಿಪ್ ಲ್ಲಿ 44.46 ಮೀ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಪಡೆದ ರಾಷ್ಟ್ರೀಯ ಕ್ರೀಡಾಪಟು ಸಿದ್ದಕಟ್ಟೆ ಗುಣಶ್ರೀ ವಿದ್ಯಾಲಯದ ವಿದ್ಯಾರ್ಥಿನಿ  ಕು.ರಮ್ಯಶ್ರೀ ಜೈನ್ ಇವರನ್ನು ಸನ್ಮಾನಿಸಲಾಯಿತು..

ಬಂಟ್ವಾಳ ನಗರ  ವಿದ್ಯಾರ್ಥಿನಿ ಪ್ರಮುಖ್ ರೇಶ್ಮಾ, ಹಾಗೂ ಸಿದ್ದಕಟ್ಟೆ ನಗರ ವಿದ್ಯಾರ್ಥಿನಿ ಪ್ರಮುಖ್ ನಿಶಾ ವೇದಿಕೆಯಲ್ಲಿ ಉಪಸ್ಥಿತರಿದ್ದರು...

ಜಯಲಕ್ಮೀ ಸ್ವಾಗತಿಸಿ, ಭಾರತಿ ವಂದಿಸಿದರು, ಚಿತ್ರಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ