ಜೂನ್ ನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮೇ ತಿಂಗಳಲ್ಲಿ: ಪರೀಕ್ಷಾ ವೇಳಾಪಟ್ಟಿ ಪ್ರಕಟ

ಜೂನ್ ನಲ್ಲಿ  ಎಸ್ಸೆಸ್ಸೆಲ್ಸಿ, ಪಿಯುಸಿ ಮೇ ತಿಂಗಳಲ್ಲಿ:  ಪರೀಕ್ಷಾ ವೇಳಾಪಟ್ಟಿ ಪ್ರಕಟ
republicday728
republicday468
republicday234

ಬೆಂಗಳೂರು: ಕೊನೆಗೂ ಈ ವರ್ಷದ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಕೊರೋನಾ ಸೋಂಕಿನಿಂಂದ ತತ್ತರಿಸಿ, ಶಾಲಾ ಕಾಲೇಜುಗಳ ಬಾಗಿಲು ತೆರೆಯುವುದೇ ದುಸ್ತರವಾಗಿತ್ತು. ಈ ವರ್ಷ ಪರೀಕ್ಷೆಗಳು ನಡೆಯುವುದೂ ಅನುಮಾನವಾಗಿತ್ತು. ಹೀಗಾಗಿ ಪರೀಕ್ಷಾ ವೇಳಾಪಟ್ಟಿ ಪ್ರಕಟನೆ ಮಹತ್ವ ಪಡೆದುಕೊಂಡಿದೆ.

 ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್ ಮೊದಲ ವಾರ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯು ಮೇ ಎರಡನೇ ವಾರದಲ್ಲಿ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

     ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ ಮತ್ತು ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿದೆ. ಈ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುವುದು. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

     ಒಂದರಿಂದ ಒಂಬತ್ತನೇ  ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ ಕಡಿತ ಪ್ರಸ್ತಾಪವು ಇಲಾಖೆಯ ಮುಂದೆ ಇಲ್ಲ. ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿ ಅಂತಿಮಗೊಳಿಸಲಾಗಿದೆ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ