ಜಮ್ಮು ಕಾಶ್ಮೀರದವರಿಗೆ ಪಾಕ್‌ನಲ್ಲಿ ಎಂಬಿಬಿಎಸ್ ಸೀಟು ಕೊಡಿಸುವ ದಂಧೆ: ಇಡಿ ದಾಳಿ

ಶ್ರೀನಗರ: ಪಾಕಿಸ್ತಾನದ ವಿವಿಧ ಕಾಲೇಜುಗಳಲ್ಲಿ ಜಮ್ಮು ಕಾಶ್ಮೀರದ ಸ್ಥಳೀಯರಿಗೆ ಎಂಬಿಬಿಎಸ್ ಸೀಟು ಕೊಡಿಸುವ ದಂಧೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಗುರುವಾರ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ.
ಶ್ರೀನಗರ ಒಂದರಲ್ಲೇ ಮೂರು ಸ್ಥಳಗಳಲ್ಲಿ ದಾಳಿ ನಡೆದಿದೆ.
ಅನಂತನಾಗ್ ಜಿಲ್ಲೆಯಲ್ಲೂ ಶೋಧನೆ ನಡೆಯುತ್ತಿವೆ ಎಂದು ವರದಿಯಾಗಿದೆ.
ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಇಡಿ ಅಧಿಕಾರಿಗಳಿಗೆ ನೆರವಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿ ಮಾಡಿದೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ