ಜಿಲ್ಲೆಯ ಸ್ಥಾನಗಳನ್ನು ಮತ್ತೆ ಕೈವಶ ಮಾಡಿಕೊಳ್ಳಿ: ಸಲೀಂ ಅಹ್ಮದ್

ಜಿಲ್ಲೆಯ ಸ್ಥಾನಗಳನ್ನು  ಮತ್ತೆ ಕೈವಶ ಮಾಡಿಕೊಳ್ಳಿ: ಸಲೀಂ ಅಹ್ಮದ್
republicday728
republicday468
republicday234

ಮಂಗಳೂರು: 2018ರ ವಿಧಾನಸಭಾ ಚುನಾವಣೆಯ ಸಂದರ್ಭ ಜಿಲ್ಲೆಯಲ್ಲಿ ಕಳೆದು ಕೊಂಡ ಸ್ಥಾನಗಳನ್ನು ಮರಳಿ ಕೈವಶಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ರವರು ಕರೆ ನೀಡಿದರು. ಅವರು ಇತ್ತೀಚೆಗೆ ಮಂಗಳೂರಿನ ಕಾಂಗ್ರೆಸ್‌ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಮುಖಂಡರ ಜೊತೆ ಮಾತನಾಡುತ್ತಿದ್ದರು.

     ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವೈಫಲ್ಯಗಳನ್ನು ನಾವು ಜನರಿಗೆ ತೋರಿಸಬೇಕು. ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಜವಾಬ್ದಾರಿಯನ್ನು ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕಾಧ್ಯಕ್ಷರುಗಳಿಗೆ ವಹಿಸಬೇಕು ಎಂದು ಸೂಚಿಸಿದರು.

     ಈ ವರ್ಷ ಕಾಂಗ್ರೆಸ್ ಗೆ ಸಂಘರ್ಷದ ವರ್ಷ. ಜೊತೆಗೆ ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡುತ್ತೇವೆ. ಹೊಸ ಕೃಷಿ ಕಾನೂನುಗಳ ದೋಷಗಳು, ಬೆಲೆ ಏರಿಕೆ ಮುಂತಾದ ಇತರ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದರು.

     ಸಭೆಯಲ್ಲಿ ದ.ಕ.ಜಿಲ್ಲಾಧ್ಯಕ್ಷ ಕೆ.ಹರೀಶ್‌ ಕುಮಾರ್‌, ರಾಜ್ಯಸಭೆಯ ಮಾಜಿ ಸದಸ್ಯ ಬಿ.ಇಬ್ರಾಹಿಂ, ದ.ಕ.ಜಿಲ್ಲಾ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ.ಶಹೀದ್, ಹೇಮನಾಥ್ ಶೆಟ್ಟಿ ಕಾವು, ವಿಶ್ವಾಸ್ ಕುಮಾರ್ ದಾಸ್, ಬ್ಲಾಕ್ ಅಧ್ಯಕ್ಷರಾದ ಡಾ.ರಾಜರಾಮ್, ಸುಧೀರ್ ಕುಮಾರ್ ಶೆಟ್ಟಿ, ಎನ್.ಎಸ್.ಕರೀಂ, ನಝೀರ್ ಮಠ, ಮುಹಿದ್ದೀನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾ ಮುಖ್ಯಸ್ಥ ಶುಭೋದಯ ಆಳ್ವ, ಜಿಲ್ಲಾ ಸಾಮಾಜಿಕ ಜಾಲತಾಣ ಮುಖ್ಯಸ್ಥ ನಿತ್ಯಾನಂದ ಶೆಟ್ಟಿ, ಫಾರೂಕ್ ಬಯಾಬೆ ಮತ್ತಿತರರು ಉಪಸ್ಥಿತರಿದ್ದರು.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ವಂದಿಸಿದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ