ಜೆ. ಎಂ. ಹಾಜಿ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ

ಜೆ. ಎಂ. ಹಾಜಿ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ
republicday728
republicday468
republicday234

ಮಂಗಳೂರು: ಕೆಪಿಸಿಸಿ ಸದಸ್ಯರಾಗಿ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದ ಜೆ. ಮುಹಮ್ಮದ್ ಹಾಜಿ ಅವರು ವಿಧಿವಶರಾದ ಸುದ್ದಿ ನೋವು ತಂದಿದ್ದು, ಜಿಲ್ಲಾ ಕಾಂಗ್ರೆಸ್ ಗೆ ತುಂಬಲಾರದ ನಷ್ಟ. ಸಮಾಜದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಶ್ರಮಿಸಿದ ಅವರ ನಿಧನದಿಂದ ಸಜ್ಜನ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ತನ್ನ ಸಂತಾಪ ಸೂಚನೆಯಲ್ಲಿ ತಿಳಿಸಿದೆ.

      ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಶಾಸಕ ಯು.ಟಿ.ಖಾದರ್, ಮಾಜಿ ಶಾಸಕರಾದ ಮೊಹಮ್ಮದ್ ಮಸೂದ್, ವಸಂತ್ ಬಂಗೇರಾ, ಐವನ್ ಡಿಸೋಜಾ,  ಮೊಯ್ದೀನ್ ಬಾವಾ, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ,  ಮ.ನ.ಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಮಿಥುನ್ ರೈ, ಕೋಡಿಜಾಲ್ ಇಬ್ರಾಹೀಂ, ತಾ.ಪಂ.ಅಧ್ಯಕ್ಷ ಮಲಾರ್ ಮೋನು, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಉಪಾಧ್ಯಕ್ಷ ಡಾ.ಶಕೀಲ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ನಝೀರ್ ಬಜಾಲ್, ಶಾಲೆಟ್ ಪಿಂಟೊ, ಎನ್.ಎಸ್ ಕರೀಂ, ಮೊಹಮ್ಮದ್ ಕುಂಜತ್ತಬೈಲ್, ಸಂತೋಷ್ ಕುಮಾರ್ ಶೆಟ್ಟಿ, ಶಬ್ಬೀರ್.ಎಸ್, ಯು.ಬಿ.ಸಲೀಂ, ಬಿ.ಎಚ್.ಖಾದರ್, ನೀರಜ್ ಚಂದ್ರ ಪಾಲ್, ಟಿ.ಕೆ.ಸುಧೀರ್ ಮುಂತಾದವರು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ