ತಮಿಳುನಾಡು ಬಿಜೆಪಿ ನಾಯಕನ ಅಶ್ಲೀಲ ವೀಡಿಯೋ ಕರೆ ವೈರಲ್‌: ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ

ತಮಿಳುನಾಡು ಬಿಜೆಪಿ ನಾಯಕನ ಅಶ್ಲೀಲ ವೀಡಿಯೋ ಕರೆ ವೈರಲ್‌: ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ
ತಮಿಳುನಾಡು ಬಿಜೆಪಿ ನಾಯಕನ ಅಶ್ಲೀಲ ವೀಡಿಯೋ ಕರೆ ವೈರಲ್‌: ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ

ಚೆನ್ನೈ: ಕುಟುಕು ಕಾರ್ಯಾಚರಣೆ (ಸ್ಟಿಂಗ್‌ ಒಪರೇಷನ್‌) ಮೂಲಕ ಸೆರೆ ಹಿಡಿಯಲಾದ ಪಕ್ಷದ ಮಹಿಳಾ ಸದಸ್ಯರೊಂದಿಗಿನ ವೀಡಿಯೋ ಕರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆಯೇ ತಮಿಳುನಾಡು ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೆ.ಟಿ.ರಾಘವನ್‌ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

     ಬಿಜೆಪಿಯ ಸದಸ್ಯರಾದ ಯೂಟ್ಯೂಬರ್, ಮದನ್ ರವಿಚಂದ್ರನ್ ಅವರು ಈ ವೀಡಿಯೋವನ್ನು ರೆಕಾರ್ಡ್ ಮಾಡಿ ತಮ್ಮ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ರವಿಚಂದ್ರನ್ ಅವರು ಕನಿಷ್ಠ 15 ತಮಿಳುನಾಡು ಬಿಜೆಪಿ ನಾಯಕರ ಸ್ಟಿಂಗ್ ವಿಡಿಯೋಗಳನ್ನು ಹೊಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಅವರುಕೆ.ಟಿ.ರಾಘವನ್ ಅವರ ವೀಡಿಯೋದೊಂದಿಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಸಂಪರ್ಕಿಸಿದಾಗ, ಮಹಿಳೆಗೆ ನ್ಯಾಯ ಒದಗಿಸುವ ಹಿತದೃಷ್ಟಿಯಿಂದ ವೀಡಿಯೊವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

      ಮಹಿಳೆಯೊಂದಿಗೆ ವೀಡಿಯೋ ಕರೆಯಲ್ಲಿ ನಿರತನಾಗಿದ್ದೇನೆ ಎಂಬಂತೆ ತೋರಿಸಲಾಗಿದೆ. ಈ ವೀಡಿಯೋದಲ್ಲಿ ನನ್ನ ಪಾತ್ರವಿಲ್ಲ. ನನ್ನ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಈ ವೀಡಿಯೋ ಮಾಡಲಾಗಿದೆ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

     ವಿವಾದಾತ್ಮಕ ವೀಡಿಯೋ ವೈರಲ್‌ ಆಗಿರುವ ಕುರಿತು ಮಾಹಿತಿ ಸಿಗುತ್ತಿದ್ದಂತೆಯೇ ರಾಘವನ್‌ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ರಾಘವನ್‌ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಅವರು ಹಾಗೂ ಪಕ್ಷದ ಇತರ ಕೆಲ ಕಾರ್ಯಕರ್ತರ ವಿರುದ್ಧ ಮಾಡಲಾಗಿರುವ ಆರೋಪಗಳ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಅಣ್ಣಾಮಲೈ ಸುದ್ದಿಗಾರರಿಗೆ ತಿಳಿಸಿದರು.

     ರಾಘವನ್‌ ತಾವು ನಿರಪರಾಧಿ ಎಂಬುದನ್ನು ಸಾಬೀತುಪಡಿಸುವರು ಎಂಬ ವಿಶ್ವಾಸ ಇದೆ ಎಂದೂ ಅವರು ಹೇಳಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ