ದ.ಕ.ಜಿಲ್ಲೆ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ

ದ.ಕ.ಜಿಲ್ಲೆ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ

ಬೆಂಗಳೂರು, ಜೂನ್ 10: ದ.ಕ.ಜಿಲ್ಲೆ ಸೇರಿದಂತೆ ಪಾಸಿಟಿವಿಟಿ ರೇಟ್ ಹೆಚ್ಚಿರುವ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

       ಉಸ್ತುವಾರಿ ಸಚಿವರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಈಗಿರುವ ಲಾಕ್ ಡೌನ್ ಮುಂದುವರಿಯಲಿದೆ.

      ಎಲ್ಲಾ ಕಾರ್ಖಾನೆಗಳಲ್ಲಿ ಶೇ. 50, ಗಾರ್ಮೆಂಟ್‌ನಲ್ಲಿ ಶೇ.30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.

     ಲಾಕ್ ಡೌನ್ ಸಡಿಲಗೊಳಿಸಿರುವ ಜಿಲ್ಲೆಗಳಲ್ಲಿ ಅಗತ್ಯ ವಸ್ತು ಖರೀದಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ. ನಿರ್ಮಾಣ ಚಟುವಟಿಕೆ ಮತ್ತು ಅದಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

      ಉದ್ಯಾನವನಗಳಲ್ಲಿ 10ಗಂಟೆವರೆಗೆ ವಾಕಿಂಗ್ ನಡೆಸಲು ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಮಧ್ಯಾಹ್ನ 2ರವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ.

      ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಲು ಅವಕಶ ಕೊಡಲಾಗಿದೆ. ಅಂತರ್ ಜಿಲ್ಲಾ ನಿರ್ಬಂಧವನ್ನು ತೆಗೆದುಹಾಕಲಾಗಿದೆ.

      ಲಾಕ್ ಡೌನ್ ಮುಂದುವರಿಯಲಿರುವ ಜಿಲ್ಲೆಗಳಲ್ಲಿ ಈಗಿರುವಂತೆ ಲಾಕ್ ಡೌನ್ ನಿಯಮಗಳು ಮುಂದುವರಿಯಲಿವೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ