ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳ

ಬೆಂಗಳೂರು: ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ದಕ್ಷಿಣ ಕನ್ನಡದಲ್ಲಿ 422 ಪ್ರಕರಣಗಳ ಸಹಿತ 24 ಗಂಟೆಗಳ ಅಂತರದಲ್ಲಿ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆಗಿಂತಲೂ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಬುಧವಾರ ಹೆಚ್ಚಳವಾಗಿದೆ. ಕೊರೊನಾ ವೈರಸ್‌ ಸೋಂಕು ಖಚಿತ ಪ್ರಮಾಣ ಶೇ.1.09 ಹಾಗೂ ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ.1.80 ದಾಖಲಾಗಿದೆ.

      ರಾಜ್ಯದಲ್ಲಿ ಕೋವಿಡ್‌ ದೃಢಪಟ್ಟ 1,826 ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸೋಂಕಿನಿಂದ 33 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 1,618 ಮಂದಿ ಗುಣಮುಖರಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

      ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 29.22 ಲಕ್ಷ ದಾಟಿದ್ದು, ಈ ಪೈಕಿ 28.63 ಲಕ್ಷಕ್ಕೂ ಹೆಚ್ಚು ಜನ ಗುಣಮುಖರಾಗಿದ್ದಾರೆ ಹಾಗೂ 36,881 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಾದ್ಯಂತ 22,851 ಪ್ರಕರಣಗಳು ಸಕ್ರಿಯವಾಗಿವೆ.

      ದಕ್ಷಿಣ ಕನ್ನಡದಲ್ಲಿ 422 ಪ್ರಕರಣಗಳು, ಬೆಂಗಳೂರಿನಲ್ಲಿ 377, ಹಾಸನದಲ್ಲಿ 175, ಉಡುಪಿಯಲ್ಲಿ 130, ಮೈಸೂರಿನಲ್ಲಿ 118 ಹೊಸ ಪ್ರಕರಣಗಳು ದಾಖಲಾಗಿವೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ