ನೀಟ್ ಮರು ಪರೀಕ್ಷೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನೀಟ್ ಮರು ಪರೀಕ್ಷೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್–ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳ ಬೆನ್ನಲ್ಲೇ, 2024ನೇ ಸಾಲಿನ ನೀಟ್–ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.

      ಈ ಕುರಿತು ಶಿವಾಂಗಿ ಮಿಶ್ರಾ ಮತ್ತು ಇತರರು ಜೂನ್ 1ರಂದು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಈ ಪ್ರಕರಣದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಅನ್ನು ಪ್ರತಿವಾದಿಯನ್ನಾಗಿಸಿದ್ದಾರೆ. ಅಲ್ಲದೆ, ಪ್ರಶ್ನೆಪತ್ರಿಕೆಯ ಸೋರಿಕೆ ಹಾಗೂ ಪರೀಕ್ಷೆಯ ಮಾನ್ಯತೆಯನ್ನೂ ಪ್ರಶ್ನಿಸಿದ್ದಾರೆ. ರಜಾಕಾಲದ ಪೀಠವು ಈ ವಾರ ಈ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ.

      2024ನೇ ಸಾಲಿನ ನೀಟ್ ಪರೀಕ್ಷೆಯು ಕಳೆದ ತಿಂಗಳ 5ರಂದು ನಡೆದಿತ್ತು.

      ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಹಾಗೂ ಇತರೆ ಕೋರ್ಸ್‌ಗಳ ಪ್ರವೇಶಾತಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ಈ ಪರೀಕ್ಷೆಯನ್ನು ನಡೆಸಿತ್ತು. ಜೂನ್ 14ರಂದು ಇದರ ಫಲಿತಾಂಶ ಪ್ರಕಟವಾಗಬೇಕಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ