ನ.15-17 ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ

ನ.15-17 ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದ್ದು, ನ.15ರಿಂದ 17ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನ.15ರಂದು ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ.

      ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗುವ ಸೂಚನೆಗಳಿರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

      ಅಂಡಮಾನ್‌ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗಲಿದೆ. ಇದೇ 18ರ ನಂತರ ರಾಜ್ಯದಲ್ಲಿ ಮಳೆ ತಗ್ಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

      ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಭಾನುವಾರ 19 ಸೆಂ.ಮೀನಷ್ಟು ಗರಿಷ್ಠ ಮಳೆಯಾಗಿದೆ. ಧರ್ಮಸ್ಥಳ 14, ಶ್ರೀರಂಗಪಟ್ಟಣ 9, ಬೆಳ್ತಂಗಡಿ 6, ಮೈಸೂರು 5, ಪುತ್ತೂರು, ಹಾಸನ, ಪಾವಗಡ 4, ಚಿಂಚೋಳಿ, ತೀರ್ಥಹಳ್ಳಿ, ಸೊರಬ, ಮದ್ದೂರು, ಮಳವಳ್ಳಿ, ನಂಜನಗೂಡು 3, ಕಾರ್ಕಳ, ಚಿಕ್ಕಮಗಳೂರು, ಮಂಡ್ಯ, ಗಂಗಾವತಿ, ಹಿರಿಯೂರು, ಮಡಿಕೇರಿ, ಅರಕಲಗೂಡು, ನೆಲಮಂಗಲ 2, ಮೂಡುಬಿದರೆ, ಗದಗ, ಚಿಂತಾಮಣಿ, ತಿಪಟೂರು, ಕೊಳ್ಳೇಗಾಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ದಾವಣಗೆರೆಯಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ