ಪುತ್ತೂರು : ಉಪ್ಪಿನಂಗಡಿ ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕ ಮೃತ್ಯು..!

ಪುತ್ತೂರು : ಉಪ್ಪಿನಂಗಡಿಯ ಕಲ್ಲೇರಿಯ ಶಿವಗಿರಿ ಎಂಬಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಅಬೂಬಕ್ಕರ್ ಸಿದ್ದೀಕ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಕುಪ್ಪೆಟ್ಟಿ ನಿವಾಸಿ ಕೂಲಿ ಕಾರ್ಮಿಕ ಇಬ್ರಾಹೀಂ ಯಾನೆ ಅನ್ನೋನು ಎಂಬವರ ಪುತ್ರ ಅಬೂಬಕ್ಕರ್ ಸಿದ್ದೀಕ್ (16) ಫೆ.1ರಂದು ಈತ ತನ್ನ ಸ್ನೇಹಿತ ಮುಹಮ್ಮದ್ ಕಲೀಲ್ ಎಂಬಾತನೊಂದಿಗೆ ದ್ವಿಚಕ್ರ ವಾಹನದಲ್ಲಿ ಕರಾಯ ಕಡೆಯಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದ ಸಂದರ್ಭ ಶಿವಗಿರಿ ಬಳಿ ಗೂಡ್ಸ್ ರಿಕ್ಷಾದ ಹಿಂಬದಿಗೆ ಇವರ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿತ್ತು.
ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಅಬೂಬಕ್ಕರ್ ಸಿದ್ದೀಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿರುವ ಮುಹಮ್ಮದ್ ಕಲೀಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ಮೃತನು ತಂದೆ, ತಾಯಿ ಹಾಗೂ ಓರ್ವ ಸಹೋದರಿ ಹಾಗೂ ಆರು ಮಂದಿ ಸಹೋದರರನ್ನು ಅಗಲಿದ್ದಾನೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ