ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾಗದಂತೆ ನೋಡಿಕೊಳ್ಳುತ್ತೇವೆ – ರಾಹುಲ್ ಗಾಂಧಿ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾಗದಂತೆ ನೋಡಿಕೊಳ್ಳುತ್ತೇವೆ – ರಾಹುಲ್ ಗಾಂಧಿ
republicday728
republicday468
republicday234

ಗುವಾಹಟಿ: ಸಮಾಜವನ್ನು ವಿಭಜಿಸಲು ಬಿಜೆಪಿಯು ದ್ವೇಷವನ್ನು ಮಾರಾಟ ಮಾಡುತ್ತಿದೆ. ಅವರು ದ್ವೇಷವನ್ನು ಹರಡುವ ಜಾಗಗಳಲ್ಲಿ ನಾವು ಪ್ರೀತಿ ಮತ್ತು ಸಾಮರಸ್ಯವನ್ನು ಬಿತ್ತಲಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಅಸ್ಸಾಂನಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾಗದಂತೆ ನೋಡಿಕೊಳ್ಳುವುದಾಗಿ ಅವರು ಹೇಳಿದರು.
      ಅಸ್ಸಾಂನ ದಿಬ್ರುಗರ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡುತ್ತಿದ್ದ ಅವರು, ಅಸ್ಸಾಂನಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾಗದಂತೆ ನೋಡಿಕೊಳ್ಳುತ್ತೇವೆ. ಅಸ್ಸಾಂ ಒಪ್ಪಂದದ ಅನುಸಾರ ಜನರ ಹಕ್ಕುಗಳನ್ನು ನಾವು ರಕ್ಷಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ನಾಗಪುರದ ಶಕ್ತಿಯೊಂದು ದೇಶವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಆದರೆ, ಯುವಕರು ಈ ಪ್ರಯತ್ನವನ್ನು ಪ್ರೀತಿ ಮತ್ತು ಆತ್ಮವಿಶ್ವಾಸದಿಂದ ಎದುರಿಸಲಿದ್ದಾರೆ ಎಂದು ಆರ್‌ಎಸ್‌ಎಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
     ಅಸ್ಸಾಂನಲ್ಲಿ ಅಧಿಕಾರದಲ್ಲಿರುವ ಬಿಜೆಪಿಯನ್ನು ಶತಾಯಗತಾಯ ಸೋಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ರಾಜ್ಯದಲ್ಲಿ ವಿವಿಧ ಆರು ರಾಜಕೀಯ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ವಿರೋದಿಗಳü ಎಲ್ಲಾ ಮತಗಳನ್ನು ಧ್ರುವೀಕರಣಗೊಳಿಸಿÀ ಬಿಜೆಪಿಯನ್ನು ಅಧಕಾರದಿಂದ ಕೆಳಗಿಳಿಸುವ ಪ್ರಯತ್ನವನ್ನೂ ಆರಂಭಿಸಿದೆ.
     ಒಟ್ಟು126 ಸದಸ್ಯಬಲದ ಅಸ್ಸಾಂ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಮಾರ್ಚ್ 27ರಂದು (47 ಕ್ಷೇತ್ರಗಳಿಗೆ) ಎರಡನೇ ಹಂತ ಏಪ್ರಿಲ್ 1ರಂದು (39 ಕ್ಷೇತ್ರಗಳಿಗೆ) ಹಾಗೂ ಮೂರನೇ ಹಂತದ ಮತದಾನ ಏಪ್ರಿಲ್ 6ರಂದು (40 ಕ್ಷೇತ್ರಗಳಲ್ಲಿ) ಮತದಾನ ನಡೆಯಲಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ