ಬಂಟ್ವಾಳಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಭೇಟಿ

ಬಂಟ್ವಾಳಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಭೇಟಿ
republicday728
republicday468
republicday234

ಬಂಟ್ವಾಳ: ತಾಲೂಕು ಕೇಂದ್ರ ಆಸ್ಪತ್ರೆಗೆ ಹೆಚ್ಚುವರಿ ಸಿಬ್ಬಂದಿ, ಡಿ ದರ್ಜೆ ನೌಕರರನ್ನು ನಿಯೋಜಿಸುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

      ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಆಡಳಿತ ವ್ಯವಸ್ಥೆ, ಆರೋಗ್ಯ ಸೇವೆ, ಪ್ರಾಥಮಿಕ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಬಂಟ್ವಾಳ ಶಾಸಕರು, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಮಾತುಕತೆ ನಡೆಸಿದರು.

      ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು. ಆಸ್ಪತ್ರೆಯ ಸೇವೆಯ ಗುಣಮಟ್ಟವನ್ನು ಉನ್ನತಗೊಳಿಸಲು ಹೆಚ್ಚುವರಿ ವೈದ್ಯಕೀಯ ಉಪಕರಣಗಳನ್ನು ಒದಗಿಸುವ ಬಗ್ಗೆ ಸಂಬಂಧಿತರಿಗೆ ನಿರ್ದೇಶನ ನೀಡಿದರು.

       ಶಾಸಕ ರಾಜೇಶ್ ನಾಯ್ಕ್ ಅವರ ಬೇಡಿಕೆಯನ್ವಯ ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯನ್ನು 6 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವುದಾಗಿ ತಿಳಿಸಿದರು.

 ಗಾಯಾಳುಗಳಿಗೆ ಸಾಂತ್ವನ: ಖಾಸಗಿ ಬಸ್ ಅಪಘಾತಗೊಂಡು ಆಸ್ಪತ್ರೆ ಸೇರಿರುವ  ಗಾಯಾಳುಗಳನ್ನು ಇದೇ ವೇಳೆ ಭೇಟಿ ಮಾಡಿ  ಸಾಂತ್ವನ ಹೇಳಿದರು.

        ಬಂಟ್ವಾಳ ಎಸ್.ವಿ.ಎಸ್ ಕಾಲೇಜು ಬಳಿ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾಗಿ ಗಾಯಾಳುಗಳನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಸಚಿವರು ತನ್ನೆಲ್ಲಾ ಕಾರ್ಯಕ್ರಮಗಳನ್ನು ಬದಿಗೊತ್ತಿ ಸ್ಥಳೀಯ ಶಾಸಕರಾದ ರಾಜೇಶ್ ನಾಯ್ಕ್ ಜೊತೆ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿದರು‌. ಗಾಯಾಳುಗಳ ಭೇಟಿಯ ನಂತರ ವೈದ್ಯರ ಜೊತೆ ಮಾತುಕತೆ ನಡೆಸಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ