ಬಾಂಗ್ಲಾದೇಶದ ರಾಜಧಾನಿ ಢಾಕಾದ ಏಳಂತಸ್ತಿನ ಕಟ್ಟಡದಲ್ಲಿ ಭಾರೀ ಸ್ಫೋಟ: 14 ಜನ ಸಾವು

ಬಾಂಗ್ಲಾದೇಶದ ರಾಜಧಾನಿ ಢಾಕಾದ ಏಳಂತಸ್ತಿನ ಕಟ್ಟಡದಲ್ಲಿ ಭಾರೀ ಸ್ಫೋಟ: 14 ಜನ ಸಾವು

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ಗುಲಿಸ್ತಾನ ಸಿದ್ಧಿಕಿ ಬಜಾರ್ ಎಂಬ ಜನನಿಬಿಡ ಪ್ರದೇಶದ ಏಳಂತಸ್ತಿನ ಕಟ್ಟಡವೊಂದರಲ್ಲಿ ಮಂಗಳವಾರ ಸಂಜೆ 4:50 ಗಂಟೆಗೆ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದೆ.

      ಸ್ಫೋಟದ ತೀವ್ರತೆಗೆ 14 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನೂರಾರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಢಾಕಾದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

      ಸ್ಫೋಟ ದ ತೀವ್ರತೆಗೆ ಸಾವು ನೋವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳದಲ್ಲಿ ಬಾಂಬ್ ನಿಷ್ಕ್ರೀಯ ತಂಡ ಹಾಗೂ ಪರಿಹಾರ ಕಾರ್ಯಾಚರಣೆ ತಂಡ ಬೀಡು ಬಿಟ್ಟಿದೆ ಎಂದು ಢಾಕಾ ಪೊಲೀಸರು ತಿಳಿಸಿದ್ದಾರೆ.

      ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಟ್ಟಡದ ನೆಲಮಹಡಿಯಲ್ಲಿ ಇನ್ನೂ ಹಲವಾರು ಜನ ಸಿಲುಕಿಕೊಂಡಿರಬಹುದು. ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ