ಬಂಟ್ವಾಳ : ರೆಫ್ರಿಜರೇಟರ್ ದುರಸ್ತಿಯ ಮಳಿಗೆಯಲ್ಲಿ ಅಗ್ನಿ ಅವಘಡ - ಅಪಾರ ಸೊತ್ತು ನಾಶ..!

ಬಂಟ್ವಾಳ : ರೆಫ್ರಿಜರೇಟರ್ ದುರಸ್ತಿಯ ಮಳಿಗೆಯಲ್ಲಿ ಅಗ್ನಿ ಅವಘಡ - ಅಪಾರ ಸೊತ್ತು ನಾಶ..!

ಬಂಟ್ವಾಳ : ರೆಫ್ರಿಜರೇಟರ್ ದುರಸ್ತಿ ಮಳಿಗೆಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಮೀಪದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

      ಇಲ್ಲಿನ ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

      ಗುಡ್ಡೆ ಅಂಗಡಿಯ ನಿವಾಸಿಯಾಗಿರುವ ಫಾರೂಕ್ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

      ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಸೇರಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ