ಬಂಟ್ವಾಳ: ಹಲವೆಡೆ ಎನ್ಐಎ ಶೋಧ

ಬಂಟ್ವಾಳ: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ನೆರವಾದವರ ಪತ್ತೆ ಸಲುವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡ ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಹಲವೆಡೆ ಸೋಮವಾರ ಶೋಧ ನಡೆಸುತ್ತಿದೆ.
ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ ರೀತಿಯಲ್ಲಿ ಹಣ ವರ್ಗಾವಣೆ ಆಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಾಣೆಮಂಗಳೂರಿನ ಮತ್ತು ಮೆಲ್ಕಾರ್ ನ ಸೈಬರ್ ಸೆಂಟರ್ ಗಳಿಗೂ ಎನ್ಐಎ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಕಲೆ ಹಾಕಿದ್ದಾರೆ ಎಂದು ಗೊತ್ತಾಗಿದೆ.
ನಿರ್ದಿಷ್ಟವಾಗಿ ಯಾವ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಲಾಗಿದೆ ಎಂಬುದನ್ನು ಎನ್ಐಎ ಇನ್ನೂ ಬಹಿರಂಗಪಡಿಸಿಲ್ಲ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ