ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ: ಯತ್ನಾಳ್ ಗಂಭೀರ ಆರೋಪ

ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ: ಯತ್ನಾಳ್ ಗಂಭೀರ ಆರೋಪ

ಬೆಂಗಳೂರು, ಜನವರಿ 13: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಮತ್ತಷ್ಟು ಹೆಚ್ಚಿಸಿದೆ. ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
    ಬ್ಲಾಕ್ ಮೇಲ್ ಮಾಡಿದವರಿಗೆ, ಹಣ ಕೊಟ್ಟವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇನ್ನು ಕೆಲವರು ಸಿ.ಡಿ ತೋರಿಸಿ ಯಡಿಯೂರಪ್ಪರವರನ್ನು ಹೆದರಿಸಿ ಸಚಿವರಾಗಿದ್ದರೆ ಎಂದು ವಿಜಾಪುರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
  ಮೂರು ಸಚಿವರು ಬ್ಲಾಕ್ ಮೇಲ್   ಮಾಡಿ ಸಚಿವ ಸ್ಥಾನ ಗಿಟ್ಟಿಸಿದವರು. ಇದೇ ಮೂವರು ಈ ಹಿಂದೆ ನನ್ನನ್ನು ಭೇಟಿಯಾಗಿದ್ದರು. ನಾವೆಲ್ಲ ಸೇರಿ ಸಿಎಂ ಯಡಿಯೂರಪ್ಪರನ್ನು ಕೆಳಗಿಳಿಸೋಣ ಎಂದಿದ್ದರು ಎಂದು ಹೇಳಿದರು.

     ಇನ್ನು ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೇಸರಗೂಂಡ  ಯತ್ನಾಳ್ ಲಿಂಗಾಯತ ಸಮುದಾಯದ ಮರ್ಯಾದೆ ತೆಗೆದಿದ್ದಾರೆ. ಸಿಎಂಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಬರಲಿ ಎಂದು ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ