ಭಗತ್ ಸಿಂಗ್ ಸ್ಮರಣೆಗಾಗಿ ಯುವ ಕಾಂಗ್ರೆಸ್ ನಿಂದ ರಕ್ತದಾನ - ಲುಕ್ಮಾನ್

ಭಗತ್ ಸಿಂಗ್ ಸ್ಮರಣೆಗಾಗಿ ಯುವ ಕಾಂಗ್ರೆಸ್ ನಿಂದ ರಕ್ತದಾನ - ಲುಕ್ಮಾನ್
republicday728
republicday468
republicday234

ಮಂಗಳೂರು: ಯುವ ಕಾಂಗ್ರೆಸ್ಸಿನ ದ.ಕ.ಜಿಲ್ಲಾ ಸಮಿತಿ ಸಭೆಯು ಇಂದು ಜಿಲ್ಲಾಧ್ಯಕ್ಷ ಲುಕ್ಮಾನ್‌ ಬಂಟ್ವಾಳರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಡಿಸಿಸಿ ಕಛೇರಿಯಲ್ಲಿ ಜರುಗಿತು.

      ಭಗತ್ ಸಿಂಗ್ ಹುತಾತ್ಮ ದಿನದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದುಇದರ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲಾಯಿತು. ಮಾರ್ಚ್‌ 23 ರಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು ಯುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕೆಂದು ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲುಕ್ಮಾನ್‌ ಬಂಟ್ವಾಳ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

      ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗಿರೀಶ್ ಆಳ್ವ, ಬ್ಲಾಕ್ ಅಧ್ಯಕ್ಷರುಗಳು ಮುಂತಾದವರು ಉಪಸ್ಥಿತರಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ