ಮುಖ್ಯಮಂತ್ರಿಯವರ ಟ್ವಿಟರ್ ಮನವಿ: ರಹಸ್ಯವೇನು?

ಮುಖ್ಯಮಂತ್ರಿಯವರ ಟ್ವಿಟರ್ ಮನವಿ: ರಹಸ್ಯವೇನು?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ, ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ರಾಜ್ಯ ರಾಜಕಾರಣದಲ್ಲಿ ಬಹಳ ದೊಡ್ಡ ಚರ್ಚೆಯಾಗುತ್ತಿದೆ.

      ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿಯವರ ಮನವಿ ನಾಯಕತ್ವ ಬದಲಾವಣೆಯ ಅನಿವಾರ್ಯ ಒತ್ತಡಕ್ಕೆ ಬಲಿಯಾಗುತ್ತಿದ್ದಾರೆಯೇ ಎಂಬ ಸಂಶಯಕ್ಕೆ ಮತ್ತಷ್ಟೂ ಪುಷ್ಠಿ ನೀಡಿದೆ. ಅವಧಿ ಮುಗಿಯುವವರೆಗೂ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದ ಯಡಿಯೂರಪ್ಪ ಮಠಾಧೀಶರುಗಳ ಬಹಿರಂಗ ಬೆಂಬಲದ ನಡುವೆಯೂ ಟ್ವಿಟರ್‌ನಲ್ಲಿ ಮನವಿ ಮಾಡಿಕೊಂಡಿದ್ದು, ಯಾರೂ ಕೂಡ ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಹೇಳಿದ್ದಾರೆ. ಇದು ಅಧಿಕಾರದಿಂದ ಕೆಳಗಿಳಿಯಲೇ ಬೇಕಾದ ಮುನ್ಸೂಚನೆಯೇ ಎಂಬ ಸಂಶಯ ಮೂಡಿದೆ.

      ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಯಡಿಯೂರಪ್ಪ ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ