ಮಂಗಳೂರಿಗೆ ರಾಷ್ಟ್ರಪತಿ: ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಮಂಗಳೂರಿಗೆ ರಾಷ್ಟ್ರಪತಿ: ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಮಂಗಳೂರು: ಮಂಗಳೂರು ನಗರಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ನಗರದ ಸಂಚಾರ ವ್ವಸ್ಥೆಯಲ್ಲಿ  ತಾತ್ಕಾಲಿಕವಾಗಿ ಮಾರ್ಪಾಡು ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

      ಅ.7ರಂದು ಸಂಜೆ 6 ಗಂಟೆಯಿಂದ ಅ.8ರಂದು ಬೆಳಗ್ಗೆ 11 ಗಂಟೆವರೆಗೆ ಈ ಮಾರ್ಪಾಡು ಜಾರಿಯಲ್ಲಿರುತ್ತದೆ. ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಜಂಕ್ಷನ್‌ನಿಂದ ಸರ್ಕ್ಯೂಟ್ ಹೌಸ್ ಜಂಕ್ಷನ್ ಮುಖಾಂತರ ಬಿಜೈನ ಬಟ್ಟಗುಡ್ಡದ ರಸ್ತೆಯಲ್ಲಿ ಸಂಚರಿಸುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

      ಕೆಪಿಟಿಯಿಂದ ಸರ್ಕ್ಯೂಟ್ ಹೌಸ್ ಜಂಕ್ಷನ್-ಬಟ್ಟಗುಡ್ಡೆ ಮೂಲಕ ನಗರಕ್ಕೆ ಪ್ರವೇಶಿಸುವ ವಾಹನಗಳು ನಂತೂರು ಜಂಕ್ಷನ್ ಮೂಲಕ ನಗರ ಪ್ರವೇಶಿಸಬೇಕು. KSRTC ಬಿಜೈ ಬಟ್ಟಗುಡ್ಡೆ ಕಡೆಯಿಂದ ಕೆಪಿಟಿ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚರಿಸುವ ವಾಹನಗಳು, ಕುಂಟಿಕಾನ ಮೂಲಕ ರಾಷ್ಟ್ರೀಯ ಹೆದ್ದಾರಿ ಕಡೆಗೆ ಚಲಿಸುವುದು.

      ಬಂಟ್ಸ್ ಹಾಸ್ಟೆಲ್ ಸರ್ಕಲ್, ಕದ್ರಿ ಕಂಬಳ ರಸ್ತೆ, ಬಿಜೈ ಬಟ್ಟಗುಡ್ಡೆ ಮುಖಾಂತರ ರಾಷ್ಟ್ರೀಯ ಹೆದ್ದಾರಿಯಲ್ಲಿನ  ಕೆಪಿಟಿ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಬಂಟ್ಸ್ ಹಾಸ್ಟೆಲ್ ಸರ್ಕಲ್- ಮಲ್ಲಿಕಟ್ಟೆ ಮೂಲಕ ರಾ.ಹೆ.ಯಲ್ಲಿನ ನಂತೂರು ಜಂಕ್ಷನ್ ಮುಖಾಂತರ ಮುಂದುವರಿಯಬೇಕು.

      ಈ ತಾತ್ಕಾಲಿಕ ಅಧಿಸೂಚನೆಯು ಗೌರವಾನ್ವಿತ ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಬೆಂಗಾವಲು ವಾಹನಗಳು ಹಾಗೂ ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಅನ್ವಯಿಸುವುದಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ