ಮಂಗಳೂರು: ಯುವತಿಯ ಒಳ ಉಡುಪಿನಲ್ಲಿ ಅಕ್ರಮ ಚಿನ್ನ

ಮಂಗಳೂರು: ಯುವತಿಯ ಒಳ ಉಡುಪಿನಲ್ಲಿ ಅಕ್ರಮ ಚಿನ್ನ
republicday728
republicday468
republicday234

ಮಂಗಳೂರು. ಮಾ, 11:  ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಲ್ಲಿ ಅಕ್ರಮ ಚಿನ್ನ ಸಾಗಾಟ ಪ್ರಕರಣವು ದಿನೇ ದಿನೇ ಹೆಚ್ಚುತ್ತಲೇ ಇದೆ. ನಿನ್ನೆ ದುಬೈನಿಂದ ಆಗಮಿಸಿದ್ದ ಮಹಿಳೆಯೊಬ್ಬರು ಒಂದು ಕೋಟಿ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
     ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಮೀರ ಎಂಬಾಕೆಯನ್ನು ವಶಕ್ಕೆ ಪಡೆಯಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಅನುಮಾನದ ಮೇಲೆ ತಪಾಸಣೆ ನಡೆಸಿದಾಗ ಯುವತಿಯ ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ನಲ್ಲಿ  ಬಂಗಾರ ಸಿಕ್ಕಿದೆ. ಈಕೆಯ ಬಳಿ ಇದ್ದ  1.10 ಕೋಟಿ ರೂಪಾಯಿ ಮೌಲ್ಯದ 2.41 ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
 ಕಸ್ಟಮ್ಸ್ ಅಧಿಕಾರಿಗಳಾದ ಡಾ. ಕಪಿಲ್, ಪ್ರೀತಿ ಸುಮಾ, ರಾಕೇಶ್ ಕುಮಾರ್ ಮತ್ತು ಕ್ಷತಿ ನಾಯಕ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ