ಮುಡಾ ಹಗರಣ: ಸಿಎಂ ಪತ್ನಿಯ 14 ನಿವೇಶನಗಳ ಖಾತೆ ರದ್ದು
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದ 14 ನಿವೇಶನಗಳ ಖಾತೆಯನ್ನು ಮುಡಾ ರದ್ದುಗೊಳಿಸಿದೆ.
ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಅವರು ತಮ್ಮ ಜಮೀನಿಗೆ ಬದಲಿಯಾಗಿ ವಿಜಯನಗರದ 3 ಮತ್ತು 4ನೇ ಹಂತಗಳಲ್ಲಿ ವಿವಿಧ ಅಳತೆಯಲ್ಲಿ ನೀಡಲಾಗಿದ್ದ 14 ನಿವೇಶ ವಾಪಸ್ ಪಡೆಯುವಂತೆ ಪತ್ರದಲ್ಲಿ ಮುಡಾ ಆಯುಕ್ತರಿಗೆ ಮನವಿ ಮಾಡಿದ್ದರು.ಪತ್ರ ಬರೆದ ಮರುದಿನವೇ ಮುಡಾ 14 ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ