ಮಾಣಿ ಗ್ರಾಪಂ ಕಾಂಗ್ರೆಸ್ ಬೆಂಬಲಿತರಿಗೆ

ಮಾಣಿ ಗ್ರಾಪಂ ಕಾಂಗ್ರೆಸ್ ಬೆಂಬಲಿತರಿಗೆ

ಬಂಟ್ವಾಳ, ಡಿಸೆಂಬರ್30: ಬಂಟ್ವಾಳ ತಾಲೂಕಿನಲ್ಲಿ ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಿಧಾನ ಗತಿಯಲ್ಲಿ ನಡೆಯುತ್ತಿದ್ದು ಫಲಿತಾಂಶ ವಿಳಂಬವಾಗುತ್ತಿದೆ. ಕುತೂಹಲ ಕೆರಳಿಸಿದ ಮಾಣಿ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ 8 ಅಭ್ಯರ್ಥಿಗಳು ಗೆಲುವ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

     ಕಳೆದ ಬಾರಿಯ ಚುನಾವಣೆಯಲ್ಲಿ ಮಾಣಿ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಐವರು ಹಾಗೂ  ಬಿಜೆಪಿ ಬೆಂಬಲಿತ ಐವರು ಅಭ್ಯರ್ಥಿಗಳು ಜಯ ಗಳಿಸಿ ಸಮಬಲ ಸಾಧಿಸಿದ್ದರು. ಅಧ್ಯಕ್ಷ ಆಯ್ಕೆಯ ಸಂದರ್ಭದಲ್ಲಿ ಟಾಸ್ ಹಾಕುವ ಮೂಲಕ ಅದೃಷ್ಟದ ಆಯ್ಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬಾರಿ ಬಿಜೆಪಿ ಬೆಂಬಲಿತರಲ್ಲಿ ಕೇವಲ ಇಬ್ಬರು ಮಾತ್ರ ಆಯ್ಕೆಯಾಗಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ