ಮತ್ತೆ ಬಾರಿಸಲಿದೆ ಶಾಲಾ ಘಂಟೆ: ಮುಹೂರ್ತ ಫಿಕ್ಷ್

ಮತ್ತೆ ಬಾರಿಸಲಿದೆ ಶಾಲಾ ಘಂಟೆ: ಮುಹೂರ್ತ ಫಿಕ್ಷ್

ಬೆಂಗಳೂರು : ಜನವರಿ 1 ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತ ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಸುಧಾಕರ್ ಸೂಚನೆ ನೀಡಿದ್ದಾರೆ.

                ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಮಕ್ಕಳು ದೈನಂದಿನ ತರಗತಿಗಳಿಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್-19 ಸೋಂಕಿನ ಲಕ್ಷಣ ಇಲ್ಲದಿರುವ ಕುರಿತು ದೃಢೀಕರಣ ನೀಡಬೇಕಿದೆ.

                ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72 ಗಂಟೆಗಳ ಅಂತರದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿ, ಸೋಂಕು ಇಲ್ಲದಿರುವ ಬಗ್ಗೆ ವರದಿ ಸಲ್ಲಿಸಬೇಕು. ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯವಾಗಿರುವುದಿಲ್ಲ ಮತ್ತು ಮನೆಯಿಂದಲೇ ಯೂಟ್ಯೂಬ್ ಮತ್ತು ಇತರ ಆನ್ಲೈನ್ ಮಾಧ್ಯಮಗಳಿಂದ ಅಭ್ಯಾಸ ಮಾಡಬಹುದು.

ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ಇರಲಿದ್ದು, ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬೇಕು. ಭೌತಿಕ ಅಂತರ ಕಾಪಾಡಲು ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿರುವಂತೆ ವ್ಯವಸ್ಥೆ ರೂಪಿಸಲಾಗುವುದು. ಸುರಕ್ಷತೆ ದೃಷ್ಟಿಯಿಂದ ಬಿಸಿಯೂಟ ವಿತರಣೆ ಸದ್ಯಕ್ಕೆ ಆರಂಭವಾಗುವುದಿಲ್ಲ.

               ಸುದೀರ್ಘ ಅವಧಿಯ ನಂತರ ಶಾಲಾ ಕಾಲೇಜುಗಳ ಬಾಗಿಲುಗಳು ತೆರೆಯುತ್ತಿದ್ದು ಇದೊಂದು ಶುಭ ಸೂಚಕವಾಗಿದೆ. ಮನೆಯ ವಾತಾವರಣಕ್ಕೆ ಹೊಂದಿಕೊಂಡಿರುವ ಮಕ್ಕಳು , ಹೆತ್ತವರು ಕೋವಿಡ್ ಭೀತಿಯಿಂದ ಹೊರಬಂದು ನಿಧಾನವಾಗಿ ಶಾಲಾ ವಾತಾವರಣಕ್ಕೆ ಹೊಂದಿಕೊಳ್ಳ ಬೇಕಾಗಿದೆ. ಮತ್ತೆ ಸುತ್ತ ಮುತ್ತ ಮಕ್ಕಳ ಕಲರವ, ಶಾಲಾ ವಾಹನಗಳ ಭರಾಟೆ ಆರಂಭವಾಗುತ್ತಿರುವುದು ಸಂತಸದಾಯಕವಾಗಿದೆ.

.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ