ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಬಂಧಿತ ಆರೋಪಿಗಳನ್ನು ಮೈಸೂರಿಗೆ ಕರೆತಂದ ಪೋಲೀಸರು

ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಆರೋಪಿಗಳನ್ನು ಪೊಲೀಸರು ನಗರಕ್ಕೆ ಕರೆ ತಂದಿದ್ದಾರೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ:  ಬಂಧಿತ ಆರೋಪಿಗಳನ್ನು ಮೈಸೂರಿಗೆ ಕರೆತಂದ ಪೋಲೀಸರು

ಮೈಸೂರು: ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಆರೋಪಿಗಳನ್ನು ಪೊಲೀಸರು ನಗರಕ್ಕೆ ಕರೆ ತಂದಿದ್ದಾರೆ.

      ಅವರನ್ನು ಅಜ್ಞಾತಸ್ಥಳದಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದು, ಇವರೇ ಅತ್ಯಾಚಾರ ಎಸಗಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ‌.

      ಸ್ಥಳದಲ್ಲಿ ದೊರೆತ ತಮಿಳುನಾಡಿನ ಬಸ್ ಟಿಕೆಟ್ ಹಾಗೂ ಮೊಬೈಲ್ ಸಿಗ್ನಲ್, ಶಂಕಿತರ ಮೊಬೈಲ್ ಸಿಗ್ನಲ್ ಬಲವಾದ ಆಧಾರಗಳಾಗಿವೆ. ಒಟ್ಟು ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

      ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ಗುಡ್ಡದಲ್ಲಿ ತನ್ನ ಸ್ನೇಹಿತನ ಜೊತೆ ತೆರಳಿದ್ದ ವಿದ್ಯಾರ್ಥಿನಿಯನ್ನು ಐವರು ಸೇರಿಕೊಂಡು, ಆಕೆಯನ್ನು ಹಿಂಸಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪೋಲೀಸರು ಆರು ವಿಶೇಷ ತಂಡಗಳನ್ನು ರಚಿಸಿ ಅಪರಾಧಿಗಳ ಬಂಧನಕ್ಕೆ ವ್ಯಾಪಕ ಬಲೆ ಬೀಸಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ