ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲು ಆಗ್ರಹಿಸಿ‌ ಉಪವಾಸ ಸತ್ಯಾಗ್ರಹ ಆರಂಭಿಸಿದ BRS ನಾಯಕಿ ಕವಿತಾ

ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲು ಆಗ್ರಹಿಸಿ‌ ಉಪವಾಸ ಸತ್ಯಾಗ್ರಹ ಆರಂಭಿಸಿದ BRS ನಾಯಕಿ ಕವಿತಾ

ನವದೆಹಲಿ: ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವಂತೆ ಒತ್ತಾಯಿಸಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಿರಿಯ ನಾಯಕಿ ಕೆ. ಕವಿತಾ (K Kavitha) ಅವರು ಇಂದು ಹೊಸದಿಲ್ಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

      ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಕವಿತಾ ಅವರು ಧರಣಿ ಕೂತಿದ್ದು, ಪ್ರತಿಭಟನೆಯಲ್ಲಿ ಕನಿಷ್ಠ 12 ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

      "ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಲು ಈ ಮಸೂದೆಯನ್ನು ತರುವುದು ಮುಖ್ಯವಾಗಿದೆ" ಎಂದು ಹಿರಿಯ ಸಿಪಿಐ-ಎಂ ನಾಯಕ ಸೀತಾರಾಂ ಯೆಚೂರಿ ಹೇಳಿದ್ದಾರೆ.

      ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು, 'ಮಹಿಳಾ ಮೀಸಲಾತಿ ಮಸೂದೆಯು ಮಹತ್ವದ್ದಾಗಿದೆ ಮತ್ತು ನಾವು ಅದನ್ನು ಶೀಘ್ರದಲ್ಲೇ ತರಬೇಕಾಗಿದೆ. ಮಸೂದೆಯನ್ನು ಮಂಡಿಸುವವರೆಗೂ ಈ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ನಾನು ಎಲ್ಲಾ ಮಹಿಳೆಯರಿಗೆ ಭರವಸೆ ನೀಡುತ್ತೇನೆ" ಎಂದು ಹೇಳಿದ್ದಾರೆ.

      ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ 1/3 ಸ್ಥಾನಗಳನ್ನು ಮಹಿಳೆಯರಿಗಾಗಿ ಕಾಯ್ದಿರಿಸಲು ಸಂವಿಧಾನದ ತಿದ್ದುಪಡಿ ಮಾಡುವಂತೆ ಮಸೂದೆಯು ಪ್ರಸ್ತಾಪಿಸುತ್ತದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ