'ಮಾಜಿ ಸಚಿವ ರೋಷನ್ ಬೇಗ್'ಗೆ ಸಿಬಿಐ ವಿಶೇಷ ಕೋರ್ಟ್ ನಿಂದ ಜಾಮೀನು ಮಂಜೂರು
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ನ್ಯಾಯಂಗ ಬಂಧನದಲ್ಲಿದ್ದಂತ ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕೆಲ ದಿನಗಳ ಹಿಂದೆ ಜೈಲು ಸೇರಿದ್ದಂತ ಮಾಜಿ ಸಚಿವ ರೋಷನ್ ಬೇಗ್ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಂತಾಗಿದೆ.
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ಐಎಂಎ ವಂಚನೆ ಪ್ರಕರಣದಲ್ಲಿ ಕಳೆದ ಇತ್ತೀಚೆಗಷ್ಟೇ ಸಿಬಿಐ ನಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಲಾಗಿತ್ತು. ಇಂತಹ ಮಾಜಿ ಸಚಿವರು ಜಾಮೀನಿಗಾಗಿ ಸಿಬಿಐ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಇಂದು ರೋಷನ್ ಬೇಗ್ ಗೆ ಷರತ್ತು ಬದ್ಧ ಜಾಮೀನು ನೀಡಿದೆ.
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ