ರಜನಿಕಾಂತ್ ದಿಢೀರ್ ಸಹೋದರನ ಮನೆಗೆ ಭೇಟಿ: ತಲ್ಲಣ ಸೃಷ್ಟಿಸಿದ ರಾಜಕೀಯ

ರಜನಿಕಾಂತ್ ದಿಢೀರ್ ಸಹೋದರನ ಮನೆಗೆ ಭೇಟಿ: ತಲ್ಲಣ ಸೃಷ್ಟಿಸಿದ ರಾಜಕೀಯ
republicday728
republicday468
republicday234

ಬೆಂಗಳೂರು: ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿ ನಿಂತಿರುವ ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ದಿಢೀರನೆ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು.

ಹೌದು..ನಟ ರಜನಿಕಾಂತ್ ನಿನ್ನೆ ಬೆಂಗಳೂರಿನಲ್ಲಿರುವ ತಮ್ಮ ಹಿರಿಯ ಸಹೋದರ ಸತ್ಯನಾರಾಯಣ ಅವರ ಮನೆಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು. ಈ ವೇಳೆ ಸಾಕಷ್ಟು ಹೊತ್ತು ಕುಳಿತು ರಜನಿಕಾಂತ್ ಮತ್ತು ಸತ್ಯನಾರಾಯಣ ಅವರು ಉಭಯ ಕುಶಲೋಪರಿ ವಿಚಾರಿಸಿದರು.

ಇದೇ ಡಿಸೆಂಬರ್ 3ರಂದು ನಟ ರಜನಿಕಾಂತ್ ಜನವರಿಯಲ್ಲಿ ಹೊಸ ಪಕ್ಷ ಘೋಷಣೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ ಡಿಸೆಂಬರ್ 31ರಂದು ಹೊಸ ಪಕ್ಷ ಕಟ್ಟುವ ಕುರಿತ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿದ್ದ ರಜನಿಕಾಂತ್, 'ಈಗ ಬದಲಾವಣೆ, ರೂಪಾಂತರ ತಾರದಿದ್ದರೆ ಮತ್ತೆ ಯಾವಾಗಲೂ ಸಾಧ್ಯವಿಲ್ಲ ಎಂದಿದ್ದಾರೆ. ಜನವರಿಯಲ್ಲಿ ಪಕ್ಷ ಆರಂಭವಾಗುತ್ತದೆ, ಈ ಸಂಬಂಧ ಡಿಸೆಂಬರ್ 31ರಂದು ಘೋಷಣೆ ಮಾಡಲಾಗುವುದು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಜನರ ಬೆಂಬಲದೊಂದಿಗೆ ಧಾರ್ಮಿಕ ರಾಜಕೀಯ ತಮಿಳು ನಾಡಿನಲ್ಲಿ ಆರಂಭವಾಗಲಿದೆ ಎಂದು ತಿಳಿಸಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ