ರಜನೀಕಾಂತ್ ಗೆ ಒಲಿದ ಫಾಲ್ಕೆ ಪ್ರಶಸ್ತಿ: ಘೋಷಣೆಯ ಹಿನ್ನೆಲೆ ಸಂಶಯಿಸಿದ ಕಾಂಗ್ರೆಸ್

republicday728
republicday468
republicday234

ನವದೆಹಲಿ: ಸೂಪರ್ ಸ್ಟಾರ್ ರಜನೀಕಾಂತ್ ಅವರು ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವ ವಿಷಯ ಅವರ ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರಲು ಕಾರಣವಾದರೆ, ಚುನಾವಣಾ ಸಮಯದಲಿ ಇಂತಹ ಪ್ರತಿಷ್ಠಿತ ಪ್ರಶಸ್ತಿ ಘೋಷಿಸಿರುವ ಬಗ್ಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

      ತಮಿಳುನಾಡು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಜನಿಕಾಂತ್‌ ಅವರಿಗೆ ಪ್ರಶಸ್ತಿ ಘೋಷಿಸಿರುವುದು ಕಾಂಗ್ರೆಸ್‌ನ ಅಸಮಾಧಾನಕ್ಕೆ ಕಾರಣವಾಗಿದೆ.

ರಾಜಕೀಯ ವಿವಾದಗಳಲ್ಲಿ ಸೆಲೆಬ್ರಿಟಿಗಳನ್ನು ಎಳೆದು ತರುವ ಯಾವುದೇ ಅನಗತ್ಯ ಕೆಲಸವನ್ನು ಸರ್ಕಾರ ಮಾಡಬಾರದು. ಎಲ್ಲದರಲ್ಲೂ ರಾಜಕೀಯ ಲಾಭ ಪಡೆಯಲು ಸರ್ಕಾರ ಪ್ರಯತ್ನಿಸಬಾರದು ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

     ರಜನಿಕಾಂತ್‌ ಅವರಿಗೆ ಫಾಲ್ಕೆ ಪ್ರಶಸ್ತಿಯನ್ನು ಬಹಳ ಹಿಂದೆಯೇ ಲಭಿಸಬೇಕಿತ್ತು. ಚುನಾವಣೆಯ ಸಂದರ್ಭದಲ್ಲಿ  ಅದನ್ನು ಏಕೆ ನೀಡಲಾಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ರಜನಿಕಾಂತ್ ಅವರು ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಬಿಜೆಪಿ ಸರ್ಕಾರ ಈ ಬಗ್ಗೆ ಎಚ್ಚರದಿಂದಿರಬೇಕು. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಲಾಭ ಗಳಿಸುವ ಉದ್ದೇಶದಿಂದ ಸರ್ಕಾರ ಇದನ್ನು ಮಾಡಿದ್ದರೆ, ಇದು ಸೂಕ್ತವಲ್ಲ. ಜನರು ಇದೆಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಶುಕ್ಲಾ ಹರಿಹಾಯ್ದಿದ್ದಾರೆ.

      ನಟ ರಜನಿಕಾಂತ್‌ ಅವರಿಗೆ 51ನೇ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಗುರುವಾರ ಪ್ರಕಟಿಸಿದ್ದರು.

ತಮಿಳು ಚಿತ್ರರಂಗದಲ್ಲಿ ಖ್ಯಾತ ನಟ ದಿವಂಗತ ಶಿವಾಜಿ ಗಣೇಶನ್ ಮತ್ತು ಖ್ಯಾತ ಸಿನಿಮಾ ನಿರ್ದೇಶಕ ದಿವಂಗತ ಕೆ. ಬಾಲಚಂದರ್ ಅವರು ಈ ಹಿಂದೆ ಫಾಲ್ಕೆ ಪುರಸ್ಕಾರಕ್ಕೆ ಭಾಜನರಾಗಿದ್ದರು. ನಟ ರಜನಿಕಾಂತ್ ತಮಿಳು ಸಿನಿಮಾ ರಂಗದ ಮೂರನೇ ವ್ಯಕ್ತಿಯಾಗಿ ಫಾಲ್ಕೆ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.

ಸೂಪರ್ ಸ್ಟಾರ್ ರಜನೀಕಾಂತ್ ಅವರು ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವ ವಿಷಯ ಅವರ ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರಲು ಕಾರಣವಾದರೆ, ಚುನಾವಣಾ ಸಮಯದಲಿ ಇಂತಹ ಪ್ರತಿಷ್ಠಿತ ಪ್ರಶಸ್ತಿ ಘೋಷಿಸಿರುವ ಬಗ್ಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

      ತಮಿಳುನಾಡು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಜನಿಕಾಂತ್‌ ಅವರಿಗೆ ಪ್ರಶಸ್ತಿ ಘೋಷಿಸಿರುವುದು ಕಾಂಗ್ರೆಸ್‌ನ ಅಸಮಾಧಾನಕ್ಕೆ ಕಾರಣವಾಗಿದೆ.

ರಾಜಕೀಯ ವಿವಾದಗಳಲ್ಲಿ ಸೆಲೆಬ್ರಿಟಿಗಳನ್ನು ಎಳೆದು ತರುವ ಯಾವುದೇ ಅನಗತ್ಯ ಕೆಲಸವನ್ನು ಸರ್ಕಾರ ಮಾಡಬಾರದು. ಎಲ್ಲದರಲ್ಲೂ ರಾಜಕೀಯ ಲಾಭ ಪಡೆಯಲು ಸರ್ಕಾರ ಪ್ರಯತ್ನಿಸಬಾರದು ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

     ರಜನಿಕಾಂತ್‌ ಅವರಿಗೆ ಫಾಲ್ಕೆ ಪ್ರಶಸ್ತಿಯನ್ನು ಬಹಳ ಹಿಂದೆಯೇ ಲಭಿಸಬೇಕಿತ್ತು. ಚುನಾವಣೆಯ ಸಂದರ್ಭದಲ್ಲಿ  ಅದನ್ನು ಏಕೆ ನೀಡಲಾಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ರಜನಿಕಾಂತ್ ಅವರು ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಬಿಜೆಪಿ ಸರ್ಕಾರ ಈ ಬಗ್ಗೆ ಎಚ್ಚರದಿಂದಿರಬೇಕು. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಲಾಭ ಗಳಿಸುವ ಉದ್ದೇಶದಿಂದ ಸರ್ಕಾರ ಇದನ್ನು ಮಾಡಿದ್ದರೆ, ಇದು ಸೂಕ್ತವಲ್ಲ. ಜನರು ಇದೆಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಶುಕ್ಲಾ ಹರಿಹಾಯ್ದಿದ್ದಾರೆ.

      ನಟ ರಜನಿಕಾಂತ್‌ ಅವರಿಗೆ 51ನೇ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಗುರುವಾರ ಪ್ರಕಟಿಸಿದ್ದರು.

ತಮಿಳು ಚಿತ್ರರಂಗದಲ್ಲಿ ಖ್ಯಾತ ನಟ ದಿವಂಗತ ಶಿವಾಜಿ ಗಣೇಶನ್ ಮತ್ತು ಖ್ಯಾತ ಸಿನಿಮಾ ನಿರ್ದೇಶಕ ದಿವಂಗತ ಕೆ. ಬಾಲಚಂದರ್ ಅವರು ಈ ಹಿಂದೆ ಫಾಲ್ಕೆ ಪುರಸ್ಕಾರಕ್ಕೆ ಭಾಜನರಾಗಿದ್ದರು. ನಟ ರಜನಿಕಾಂತ್ ತಮಿಳು ಸಿನಿಮಾ ರಂಗದ ಮೂರನೇ ವ್ಯಕ್ತಿಯಾಗಿ ಫಾಲ್ಕೆ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ