ರಾಜ್ಯದಲ್ಲಿ ತಗ್ಗಲಿದೆ ಗಾಳಿ–ಮಳೆಯ ತೀವ್ರತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ತಗ್ಗಲಿದೆ ಗಾಳಿ–ಮಳೆಯ ತೀವ್ರತೆ: ಹವಾಮಾನ ಇಲಾಖೆ

ಮಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಗಾಳಿ–ಮಳೆಯ ತೀವ್ರತೆ ಸೋಮವಾರದಿಂದ ತಗ್ಗುವ ಸಾಧ್ಯತೆಯಿದ್ದು, ಮುಂದಿನ ಒಂದು ವಾರ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

     ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೋಮವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿಯ ಉಳಿದ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 30ರಿಂದ 40 ಕಿ.ಮೀ ವೇಗದಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

      ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ