ರೈತ ಪ್ರತಿಭಟನೆ: ಕಾಂಗ್ರೆಸ್ ಮುಖಂಡರು ಪೊಲೀಸ್ ವಶಕ್ಕೆ

ರೈತ ಪ್ರತಿಭಟನೆ: ಕಾಂಗ್ರೆಸ್ ಮುಖಂಡರು ಪೊಲೀಸ್ ವಶಕ್ಕೆ

ನವದೆಹಲಿ,.ಡಿಸೆಂಬರ್ 24: ಕೃಷಿ ಕಾಯ್ದೆಯನ್ನು ರದ್ದು ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸುಮಾರು 2 ಕೋಟಿ ಸಹಿ ಸಂಗ್ರಹ ಮತ್ತು ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

     ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಲು ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ತೆರಳಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ನಿಯೋಗವನ್ನು ಪೊಲೀಸರು ದಾರಿ ಮಧ್ಯೆಯೇ ತಡೆದಿದ್ದಾರೆ. ಈ ವೇಳೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
     ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ವಾರವೂ ಮುಂದುವರೆದಿದ್ದು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡಬೇಕು ಹಾಗೂ ಕಾಯ್ದೆ ರದ್ದು ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿತ್ತು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ