ವಿಧಾನ ಪರಿಷತ್‌ ಚುನಾವಣೆ: ದ.ಕ.ದಿಂದ ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್‌ ಚುನಾವಣೆ: ದ.ಕ.ದಿಂದ ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ  ನಡೆಯುವ ಚುನಾವಣೆಯಲ್ಲಿ ದಕ್ಷಿಣ‌ ಕನ್ನಡ ದ್ವಿ ಸದಸ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಂಜುನಾಥ ಭಂಡಾರಿ ಮಂಗಳವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು.

      ಈ ಸಂದರ್ಬದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ, ಅಭಯಚಂದ್ರ ಜೈನ್, ಐವನ್ ಡಿಸೋಜ ಜೊತೆಗಿದ್ದರು.

      ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಡಾ.ಮಂಜುನಾಥ ಭಂಡಾರಿ, ಬಂಟ್ವಾಳ ತಾಲ್ಲೂಕಿನ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯ ಬಂಟ ಕೃಷಿ ಮನೆತನದವರು. ರಾಜ್ಯಶಾಸ್ತ್ರ ದಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿರುವ ಮಂಜುನಾಥ ಭಂಡಾರಿ, 'ಪಂಚಾಯತ್ ರಾಜ್‌' ವಿಷಯದಲ್ಲಿ ಎಂ.ಫಿಲ್ ಮತ್ತು ಪಿಎಚ್‌ಡಿಯನ್ನೂ ಪೂರೈಸಿದ್ದಾರೆ.

       1978ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ರಾಜಕೀಯ ಪ್ರವೇಶ ಮಾಡಿದವರು. ಆಗ ಅವರು ವಿದ್ಯಾರ್ಥಿಯಾಗಿದ್ದರು. ನಂತರ ಎನ್‌ಎಸ್‌ಯುಐ ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಅಖಿಲ ಭಾರತ ಯುವ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿ, ಎಐಸಿಸಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. 2014ರಲ್ಲಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ